ನವದೆಹಲಿ: ಸೋಲು ಮತ್ತು ಗೆಲವು ಜೀವನದ ಅವಿಭಾಜ್ಯ ಭಾಗವಾಗಿದ್ದು, ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ಅತ್ಯಂತ ವಿನಂಮ್ರತೆಯಿಂದ ಸ್ವೀಕರಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢದಲ್ಲಿ ಗೆದ್ದಿರುವ ಕಾಂಗ್ರೆಸ್ಗೆ ಮತ್ತು ತೆಲಂಗಾಣದಲ್ಲಿ ಗೆದ್ದಿರುವ ಟಿಆರ್ಎಸ್ಗೆ ಅಭಿನಂದನೆಗಳನ್ನು ತಿಳಿಸಿರುವ ಅವರು, ಹಗಲು ಮತ್ತು ಇರುಳು ಎನ್ನದೆ ಪಕ್ಷಕ್ಕಾಗಿ ದುಡಿದ ಬಿಜೆಪಿ ಕಾರ್ಯಕರ್ತರನ್ನು ಶ್ಲಾಘಿಸಿದರು.
ಟ್ವಿಟ್ ಮಾಡಿರುವ ಅವರು, ‘ನಮಗೆ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢ ಜನತೆಗೆ ಧನ್ಯವಾದಗಳು. ಇಲ್ಲಿನ ಜನರಿಗಾಗಿ ಬಿಜೆಪಿ ಶ್ರಮಿಸಿದೆ’ ಎಂದರು.
ಈ ಫಲಿತಾಂಶ ಜನರಿಗೆ ಸೇವೆ ಸಲ್ಲಿಸಲು ಮತ್ತು ಅಭಿವೃದ್ಧಿಗಾಗಿ ಮತ್ತಷ್ಟು ದುಡಿಯಲು ನಮಗೆ ಹೆಚ್ಚಿನ ಜವಾಬ್ದಾರಿಯನ್ನು ನೀಡಲಿದೆ ಎಂದರು.
source: timesofindia
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.