ಬೆಂಗಳೂರು: ರಸ್ತೆ ಅಥವಾ ಫುಟ್ಪಾತ್ಗಳಲ್ಲಿ ಇನ್ನು ಮುಂದೆ ಅನಾವಶ್ಯಕವಾಗಿ ಓಡಾಡಿದಲ್ಲಿ ಅವರ ವಿರುದ್ಧ ಜೇವಾಕಿಂಗ್ ಪ್ರಕರಣ ದಾಖಲಿಸುವ ಹೊಸ ಯೋಜನೆ ಜಾರಿಗೆ ಬಂದಿದೆ.
ಈ ಯೋಜನೆಯಂತೆ ಸಾರ್ವಜನಿಕರು ಎಲ್ಲೆಂದರಲ್ಲಿ ರಸ್ತೆ ದಾಟುವುದು ಇಲ್ಲವೇ ಅನಾವಶ್ಯಕ ಓಡಾಡುತ್ತಿದ್ದರೆ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಲಿದ್ದಾರೆ. ನಗರದ ಹೊಸೂರಿನಲ್ಲಿ ಪ್ರಾಥಮಿಕ ಹಂತದ ಕಾರ್ಯ ಪ್ರಾರಂಭಿಸಲಾಗಿದ್ದು, ಈ ರಸ್ತೆಯಲ್ಲಿ ಓಡಾಡುತ್ತಿದ್ದ 28 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಪಾದಚಾರಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ೧೧೦ ರೂ. ದಂಡ ವಿಧಿಸಿ ಬಿಡುಗಡೆಗೊಳಿಸಲಾಗಿದೆ.
ರಸ್ತೆ ದಾಟುವ ಸಂದರ್ಭ ಆಗುವ ಅನಾಹುತವನ್ನು ತಪ್ಪಿಸಲು ಈ ಯೋಜನೆ ತರಲಾಗಿದ್ದು, ಹೆಚ್ಚು ಅಪಘಾತ ಸಂಭವಿಸುವ ಪ್ರದೇಶಗಳನ್ನು ಗುರುತಿಸಿ ಯೋಜನೆಯನ್ನು ವಿಸ್ತರಿಸುವ ಇರಾದೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.