ನವದೆಹಲಿ: ಭಾರತ ಮತ್ತು ಫ್ರಾನ್ಸ್ ನಡುವೆ ನಡೆದಿರುವ ರಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದದ ಬಗ್ಗೆ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಸಲಾದ ಎಲ್ಲಾ ಅರ್ಜಿಗಳನ್ನೂ ಸುಪ್ರೀಂಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ಮುಖ್ಯನ್ಯಾಯಮೂರ್ತಿ ರಂಜನ್ ಗೋಗಯ್ ನೇತೃತ್ವದ ನ್ಯಾಯಪೀಠ ಆದೇಶವನ್ನು ಹೊರಡಿಸಿದ್ದು, ಯುದ್ಧವಿಮಾನ ಒಪ್ಪಂದದಲ್ಲಿ ಸಂಶಯಪಡುವ ಯಾವುದೇ ಅಂಶಗಳಿಲ್ಲ ಮತ್ತು ಊಹೆಯನ್ನು ಆಧರಿಸಿ ತೀರ್ಪು ನೀಡಲು ಸಾಧ್ಯವಿಲ್ಲ ಎಂದಿದೆ.
ರಫೆಲ್ ಡೀಲ್ನಲ್ಲಿ ಅಕ್ರಮ ನಡೆದಿದ್ದು, ಅದನ್ನು ಸುಪ್ರೀಂಕೋರ್ಟ್ ಮೇಲುಸ್ತುವಾರಿಯಲ್ಲಿ ತನಿಖೆ ನಡೆಸಬೇಕು ಎಂದು ಕೋರಿ ವಕೀಲರಾದ ಪ್ರಶಾಂತ್ ಭೂಷಣ್, ಎಂ.ಎಲ್ ಶರ್ಮಾ ಮುಂತಾದವರು ಅರ್ಜಿಯನ್ನು ಸಲ್ಲಿಸಿದ್ದರು. ಇದೀಗ ಈ ಅರ್ಜಿಯನ್ನು ತಿರಸ್ಕರಿಸಲಾಗಿದ್ದು, ತನಿಖೆ ನಡೆಸುವುದಿಲ್ಲ ಎಂದು ಸುಪ್ರೀಂ ಸ್ಪಷ್ಟಪಡಿಸಿದೆ.
ವಿಮಾನ ಖರೀದಿ ಪ್ರಕ್ರಿಯೆಯು ನಮಗೆ ತೃಪ್ತಿಯನ್ನು ತಂದಿದೆ. ರಫೇಲ್ ಗುಣಮಟ್ಟದಲ್ಲಿ ಯಾವುದೇ ಕೊರತೆ ಇಲ್ಲ, ಅದು ನಮ್ಮ ದೇಶಕ್ಕೆ ಅವಶ್ಯಕತೆಯಾಗಿದೆ, ಒಪ್ಪಂದ ಕುರಿತು ಯಾವುದೇ ರೀತಿಯ ಸಂಶಯಗಳೂ ಇಲ್ಲ ಎಂದಿದೆ.
ಸುಪ್ರೀಂಕೋರ್ಟ್ನ ಈ ತೀರ್ಪು ರಫೆಲ್ ಹಗರಣ ನಡೆದಿದೆ ಎಂದು ಬೊಬ್ಬಿಡುತ್ತಿದ್ದ ಪ್ರತಿಪಕ್ಷಗಳಿಗೆ ತೀವ್ರ ಮುಖಭಂಗವನ್ನು ತಂದಿದೆ ಮತ್ತು ಮೋದಿ ಸರ್ಕಾರದ ಪ್ರಾಮಾಣಿಕತೆಯನ್ನು ಸ್ಪಷ್ಟೀಕರಿಸಿದೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.