ರಾಂಚಿ: ದೇಶಿ ತಳಿಯ ಗೋವುಗಳ ಸಂತತಿಯನ್ನು ಹೆಚ್ಚಿಸಲು ಜಾರ್ಖಾಂಡ್ ಪ್ರಯತ್ನಪಡುತ್ತಿದೆ. 3 ಸಾವಿರ ದೇಶಿ ಗೋವುಗಳ ಅಭಿವೃದ್ಧಿ ಕೇಂದ್ರಗಳನ್ನು ಸ್ಥಾಪನೆ ಮಾಡಲು ಅದು ನಿರ್ಧರಿಸಿದೆ.
ಅಷ್ಟೇ ಅಲ್ಲದೇ, ಗೋವುಗಳ ಅಕ್ರಮ ಸಾಗಾಟವನ್ನು ತಡೆಯಲು ಮಾರ್ಗದರ್ಶನಗಳನ್ನು ರಚಿಸುವಂತೆ ಅಧಿಕಾರಿಗಳಿಗೆ ಸರ್ಕಾರ ಆದೇಶ ನೀಡಿದೆ.
ಪಶುಸಂಗೋಪಣಾ ಮಂಡಳಿಯೊಂದಿಗೆ ಸಭೆ ನಡೆಸಿದ ಸಿಎಂ, ಗೋಶಾಲೆಗಳನ್ನು ರಿಜಿಸ್ಟರ್ ಮಾಡಿಕೊಳ್ಳುವುದು ಕಡ್ಡಾಯ ಮತ್ತು ಅವುಗಳಿಗೆ ಸರ್ಕಾರ ಸೌಲಭ್ಯ ಒದಗಿಸಲಾಗುವುದು ಎಂದರು.
ಬೀದಿಗಳಲ್ಲಿ ಓಡಾಡುವ ಗೋವುಗಳಿಗೆ ಕಂಜಿ ಹೌಸ್ಗಳನ್ನು ನಿರ್ಮಾಣ ಮಾಡುವಂತೆಯೂ ಅವರು ಸೂಚಿಸಿದ್ದಾರೆ.
ಪಶುವೈದ್ಯರಿಗೂ ಕೆಲವೊಂದು ಜವಾಬ್ದಾರಿಗಳನ್ನು ನೀಡಲಾಗುವುದು ಎಂದಿರುವ ಅವರು, ವಾರಕ್ಕೆ ಎರಡು ಬಾರಿ ಪ್ರತಿ ಪಂಚಾಯತ್ಗಳಿಗೆ ಭೇಟಿ ನೀಡುವುದು ಅಗತ್ಯ ಎಂದಿದ್ದಾರೆ.
source: newsbharati
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.