ನವದೆಹಲಿ: ಮಾಲ್ಡೀವ್ಸ್ನ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೊಲಿಹ್ ಅವರು ಭಾನುವಾರ ನವದೆಹಲಿಗೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಉಭಯ ದೇಶಗಳ ನಡುವಣ ಬಾಂಧವ್ಯವವನ್ನು ಗಟ್ಟಿಗೊಳಿಸುವ ಸಲುವಾಗಿ ದ್ವಿಪಕ್ಷೀಯ ಮಾತುಕತೆಯನ್ನು ನಡೆಸಲಿದ್ದಾರೆ.
ಸೆಪ್ಟಂಬರ್ ತಿಂಗಳಲ್ಲಿ ನಡೆದ ಚುನಾವಣೆಯಲ್ಲಿ, ಅಚ್ಚರಿ ಎಂಬಂತೆ ಮಾಲ್ಡೀವ್ಸ್ನ ಬಲಿಷ್ಠ ವ್ಯಕ್ತಿ ಅಬ್ದುಲ್ಲಾ ಯಾಮೀನ್ ಅವರನ್ನು ಸೋಲಿಸಿ ಸೊಲಿಹ್ ಅವರು ಅಧ್ಯಕ್ಷ ಗಾದಿಯನ್ನು ಏರಿದ್ದರು.
ಇದೀಗ ಭಾರತಕ್ಕೆ ಅವರು ತಮ್ಮ ಮೊದಲ ಅಧಿಕೃತ ವಿದೇಶಿ ಭೇಟಿಯನ್ನು ನೀಡಿದ್ದು, ಅವರನ್ನು ಕೇಂದ್ರ ಸಚಿವ ಹರ್ದಿಪ್ ಎಸ್ ಪುರಿ ಅವರು ಸ್ವಾಗತಿಸಿದರು.
ಇಂದು ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ದ್ವಿಪಕ್ಷೀಯ ಮಾತುಕತೆಯನ್ನು ನಡೆಸಲಿದ್ದಾರೆ. ಬಳಿಕ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಭೇಟಿಯಾಗಲಿದ್ದಾರೆ.
ಸಪತ್ನಿಕರಾಗಿ ಮೂರು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿರುವ ಅವರು, ನಾಳೆ ತಾಜ್ಮಹಲ್ಗೆ ಭೇಟಿಕೊಡಲಿದ್ದಾರೆ.
source: m.dailyhunt.in
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.