ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ನಿರ್ಮಾಪಕ ಬಗ್ಗೆ ಸಚಿವ ಅಂಬರೀಷ್ ನೀಡಿರುವ ಹೇಳಿಕೆ ಇದೀಗ ಭಾರೀ ವಿವಾದ ಸೃಷ್ಟಿಸಿದೆ.
ಅಂಬರೀಷ್ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕೆಂದು ಹಲವು ನಿರ್ಮಾಪಕರು ಆಗ್ರಹಿಸಿದ್ದು, ತಮ್ಮ ಪ್ರತಿಭಟನೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.
ನಿರ್ಮಾಪಕರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಜೆ.ಪಿ.ನಗರದಲ್ಲಿರುವ ಅಂಬರೀಷ್ ಅವರ ನಿವಾಸಕ್ಕೆ ನಿರ್ಮಾಪಕರ ಸಂಘದ ಅಧ್ಯಕ್ಷ ಮುನಿರತ್ನ, ನಿರ್ಮಾಪಕ ಕೆ.ಮಂಜು ಅವರು ತೆರಳಿದ್ದರು. ಮಾತುಕತೆಯ ಬಳಿಕ ಅಂಬರೀಷ್ ಅವರು, ‘ಬೆಗ್ಗರ್ಸ್ ಹ್ಯಾವ್ ನೋ ಚಾಯ್ಸ್’ ಎಂದು ನಿರ್ಮಾಪಕರನ್ನು ಟೀಕಿಸಿದ್ದಾರೆ ಎನ್ನಲಾಗಿದೆ.
ಇದೀಗ ಸಚಿವ ರೋಶನ್ ಬೇಗ್ ಅವರ ನೇತೃತ್ವದಲ್ಲಿ ಸಂಧಾನ ಸಭೆ ನಡೆಯುತ್ತಿದೆ. ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕಳೆದ ಎರಡು ದಿನಗಳಿಂದ ನಿರ್ಮಾಪಕರು ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.