ನವದೆಹಲಿ: ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ 1984ರ ಸಿಖ್ ವಿರೋಧಿ ದಂಗೆ ಪ್ರಕರಣದ ಅಪರಾಧಿ ಎಂದು ದೆಹಲಿ ಹೈಕೋರ್ಟ್ ಸೋಮವಾರ ತೀರ್ಪು ನೀಡಿದ್ದು, ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.
ಸಜ್ಜನ್ ಕುಮಾರ್ ಅಪರಾಧಿ ಎಂದು ಘೋಷಿಸುವ ಮೂಲಕ, ಹೈಕೋರ್ಟ್ ವಿಚಾರಣಾಧೀನ ನ್ಯಾಯಾಲಯದ ಆದೇಶವನ್ನು ತಿರಸ್ಕರಿಸಿದೆ. ಈ ಆದೇಶದಲ್ಲಿ ಆತನನ್ನು ನಿರಪರಾಧಿ ಎಂದು ಘೋಷಿಸಲಾಗಿತ್ತು.
2018ರ ಡಿಸೆಂಬರ್ 31ರೊಳಗೆ ಸಜ್ಜನ್ ಕುಮಾರ್ ಶರಣಾಗಬೇಕು ಎಂದು ಇಂದಿನ ಆದೇಶದಲ್ಲಿ ಹೈಕೋರ್ಟ್ ತಿಳಿಸಿದೆ.
ಇಂದಿರಾ ಗಾಂಧಿ ಹತ್ಯೆಯ ಬಳಿಕ ನಡೆದ ಸಿಖ್ ವಿರೋಧಿ ದಂಗೆಯಲ್ಲಿ ಈತನ ಕೈವಾಡವಿದೆ ಎಂಬ ಆರೋಪವಿದ್ದು, ಆ ಆರೋಪ ಇಂದು ದೃಢಪಟ್ಟಿದೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.