ನವದೆಹಲಿ: ಬುಡಕಟ್ಟು ಸಮುದಾಯದ ಮಕ್ಕಳಿಗೆ ಸುಮಾರು 462 ಏಕಲವ್ಯ ಮಾಡೆಲ್ ರೆಸಿಡೆನ್ಶಿಯಲ್ ಸ್ಕೂಲ್ಗಳನ್ನು ನಿರ್ಮಾಣ ಮಾಡಲು ಕೇಂದ್ರ ಸಂಪುಟ ಸಮಿತಿ ಸೋಮವಾರ ಅನುಮೋದನೆ ನೀಡಿದೆ.
ಬುಡಕಟ್ಟು ಜನಾಂಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವ ಸದುದ್ದೇಶದೊಂದಿಗೆ ಏಕಲವ್ಯ ಸ್ಕೂಲ್ಗಳನ್ನು ಸ್ಥಾಪನೆ ಮಾಡಲಾಗುತ್ತಿದೆ.
ದೇಶದ ಸುಮಾರು 102 ಬ್ಲಾಕ್ಗಳಲ್ಲಿ 462 ಏಕಲವ್ಯ ಸ್ಕೂಲ್ಗಳನ್ನು ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಇದರಿಂದ ಕನಿಷ್ಠ 20 ಸಾವಿರದಷ್ಟು ಬುಡಕಟ್ಟು ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯುವ ನಿರೀಕ್ಷೆ ಇದೆ.
ಸುಮಾರು 2242.03 ಕೋಟಿ ರೂಪಾಯಿ ವೆಚ್ಚದಲ್ಲಿ ಏಕಲವ್ಯ ಸ್ಕೂಲ್ಗಳ ನಿರ್ಮಾಣವಾಗಲಿದೆ. ಬುಡಕಟ್ಟು ವ್ಯವಹಾರಗಳ ಸಚಿವಾಲಯದಡಿಯಲ್ಲಿ ಇದು ಕಾರ್ಯನಿರ್ವಹಿಸಲಿವೆ.
source: hindusthantimes
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.