ನವದೆಹಲಿ: ರಾಷ್ಟ್ರೀಯ ಜವಳಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಕೇಂದ್ರದ ಮಾಜಿ ಜವಳಿ ಸಚಿವ ಶಂಕರ್ ಸಿನ್ಹಾ ವಘೇಲ ವಿರುದ್ಧ ಬುಧವಾರ ಸಿಬಿಐ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ವಘೇಲಾ ಮಾತ್ರವಲ್ಲದೇ ಜವಳಿ ನಿಗಮದ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕರಾಗಿರುವ ರಾಮಚಮದ್ರ ಪಿಳ್ಳೈ ಸೇರಿದಂತೆ ಇತರ ಐದು ಮಂದಿಯ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.
ವಘೇಲಾ ಅವರು ಗುಜರಾತ್ನ ಮಾಜಿ ಮುಖ್ಯಮಂತ್ರಿಯೂ ಆಗಿದ್ದಾರೆ. ಜವಳಿ ನಿಗಮದ ಆಸ್ತಿಯನ್ನು ಅತಿ ಕಡಿಮೆ ಬೆಲೆಗೆ ಖಾಸಗಿ ಸಂಸ್ಥೆಯೊಂದಕ್ಕೆ ಮಾರಾಟ ಮಾಡಿದ ಆರೋಪ ಇವರ ಮೇಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.