ತಿರುವನಂತಪುರ: ಲವ್ ಜಿಹಾದ್ ಪ್ರಕರಣದಲ್ಲಿ ದೇಶದಾದ್ಯಂತ ಭಾರೀ ಸುದ್ದಿಯಾಗಿದ್ದ ಕೇರಳದ ಯುವತಿ ಹಾದಿಯಾ ತಂದೆ ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.
ಮಂಗಳವಾರ ತಿರುವನಂತಪುರಂನಲ್ಲಿ ಹಾದಿಯಾ ತಂದೆ ಅಶೋಕನ್ ಅವರು ಅಧಿಕೃತವಾಗಿ ಬಿಜೆಪಿ ಸದಸ್ಯತ್ವವನ್ನು ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಬಗ್ಗೆ ಮಾಧ್ಯಮಗಳಿಕೆ ಹೇಳಿಕೆ ನೀಡಿರುವ ಅವರು, ‘ಮೂರು ವರ್ಷಗಳಿಂದ ಬಿಜೆಪಿಯಲ್ಲಿದ್ದೆ, ಈಗ ಅದರ ಅಧಿಕೃತ ಸದಸ್ಯತ್ವ ನನಗೆ ಸಿಕ್ಕಿದೆ. ಹಿಂದೆ ಕಮ್ಯೂನಿಸ್ಟ್ ಪಕ್ಷದಲ್ಲಿದ್ದ ನಾನು ಅದರ ಅಜೆಂಡಾ, ಸಿದ್ಧಾಂತ ಸಹಿಸಲಾಗದೆ ಹೊರನಡೆದೆ’ ಎಂದಿದ್ದಾರೆ.
ಅಲ್ಲದೇ, ಶಬರಿಮಲೆಗೆ ವಿಚಾರದಲ್ಲಿ ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
source: NDTV
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.