ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆಯಿಂದ ದೇಶದ ಸುಮಾರು 6 ಕೋಟಿ ಜನರಿಗೆ ಉದ್ಯೋಗ ಸಿಕ್ಕಿದೆ ಎಂದು ಅಂದಾಜಿಸಲಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಗೆ ಮಾಹಿತಿ ನೀಡಿದೆ.
‘ನ್ಯಾಷನಲ್ ಕೌನ್ಸಿಲ್ ಆಫ್ ಅಪ್ಲೈಡ್ ಎಕನಾಮಿಕ್ ರಿಸರ್ಚ್(ಎನ್ಸಿಎಇಆರ್)ನ 2014ರ ವರದಿಯ ಪ್ರಕಾರ, ಹೌಸಿಂಗ್ ಸೆಕ್ಟರ್ನಲ್ಲಿ ರೂ.1 ಲಕ್ಷ ಹೂಡಿಕೆ ಮಾಡಿದರೆ, ಆರ್ಥಿಕತೆಯಲ್ಲಿ 2.65 ಹೊಸ ಉದ್ಯೋಗಗಳು ಸೃಷ್ಟಿಯಾಗುತ್ತವೆ. ಇದರನ್ವಯ ದೇಶದಾದ್ಯಂತ ಆವಾಸ್ ಯೋಜನೆಯಡಿ 6.07 ಕೋಟಿ ಉದ್ಯೋಗಗಳು ಸೃಷ್ಟಿಯಾಗಿವೆ ಎಂದು ಅಂದಾಜಿಸಲಾಗಿದೆ’ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
2015ರ ಜೂನ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಆವಾಸ್ ಯೋಜನೆಗೆ ಚಾಲನೆ ನೀಡಿದ್ದರು, ‘2022ರ ವೇಳೆಗೆ ಎಲ್ಲರಿಗೂ ವಸತಿ’ ನೀಡುವ ಮಹತ್ತರ ಗುರಿಯನ್ನು ಈ ಯೋಜನೆ ಹೊಂದಿದೆ.
ನಗರ ಪ್ರದೇಶದಲ್ಲಿ 2015-2022ರ ವೇಳೆಗೆ ಒಂದು ಕೋಟಿ ಮನೆ ನಿರ್ಮಾಣದ ಗುರಿಯನ್ನು ಈ ಯೋಜನೆ ಹೊಂದಿದೆ. ಅಧಿಕೃತ ಮೂಲಗಳ ಪ್ರಕಾರ, ಡಿ.12ರವರೆಗೆ ಈ ಯೋಜನೆಯಡಿ 65,43,970 ಮನೆಗಳನ್ನು ನಿರ್ಮಾಣ ಮಾಡಲು ಅನುಮೋದನೆ ನೀಡಲಾಗಿದೆ. ಇವುಗಳ ಪೈಕಿ 35,49,531 ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. 12,26,530೦ ಮನೆಗಳ ಕಾಮಗಾರಿ ಮುಗಿದಿದೆ ಮತ್ತು 12,19,549 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರ ಮಾಡಲಾಗಿದೆ.
source: NDTV
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.