ನವದೆಹಲಿ: ಮಾಜಿ ಪ್ರಧಾನ ಮಂತ್ರಿ ಮತ್ತು ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮರಣಾರ್ಥ, ಡಿ.24ರಂದು ಪ್ರಧಾನಿ ನರೇಂದ್ರ ಮೋದಿಯವರು ನಾಣ್ಯವನ್ನು ಬಿಡುಗಡೆಗೊಳಿಸಲಿದ್ದಾರೆ.
ರೂ.100 ಮೌಲ್ಯದ ನಾಣ್ಯ ಇದಾಗಿರಲಿದ್ದು, 39 ಗ್ರಾಂ ತೂಕವಿರುತ್ತದೆ. ಒಂದು ಬದಿಯಲ್ಲಿ ವಾಜಪೇಯಿ ಭಾವಚಿತ್ರ ಮತ್ತು ಹೆಸರು ಇರಲಿದೆ. ಜನನ-ಮರಣದ ಇಸವಿ ನಮೋದಾಗಿರುತ್ತದೆ. ದೇವನಾಗರಿ ಲಿಪಿಯಲ್ಲಿ ಹೆಸರು ಬರೆಯಲಾಗುತ್ತದೆ. ಇನ್ನೊಂದು ಬದಿಯಲ್ಲಿ ನಾಣ್ಯದ ಮೌಲ್ಯ ಮತ್ತು ರಾಷ್ಟ್ರೀಯ ಲಾಂಛನ ಇರಲಿದೆ.
ಡಿ.25ರಂದು ವಾಜಪೇಯಿಯವರ ಜನ್ಮದಿನವಾಗಿದ್ದು, ಅದನ್ನು ಉತ್ತಮ ಆಡಳಿತ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಆ ದಿನ ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಅವರ ಆಳೆತ್ತರದ ಭಾವಚಿತ್ರ ಅನಾವರಣಗೊಳ್ಳಲಿದೆ.
ವಾಜಪೇಯಿಯವರು ಆಗಸ್ಟ್ 16ರಂದು ದಎಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರಿಗೆ 93 ವರ್ಷ ವಯಸ್ಸಾಗಿತ್ತು.
source: NDTV
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.