ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಸಮರ್ಪಿಸಲ್ಪಟ್ಟ ಸಮಾಧಿ ‘ಸದೈವ ಅಟಲ್’ ಇಂದು ಲೋಕಾರ್ಪಣೆಗೊಂಡಿದೆ.
ಅಟಲ್ ಅವರ 94ನೇ ಜನ್ಮದಿನದ ಹಿನ್ನಲೆಯಲ್ಲಿ ಸಮಾಧಿ ಲೋಕಾರ್ಪಣೆಗೊಂಡಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ ಈ ವೇಳೆ ಅಜಾತ ಶತ್ರುವಿಗೆ ಪುಷ್ಪ ನಮನ ಸಲ್ಲಿಕೆ ಮಾಡಿದರು.
ರಾಷ್ಟ್ರೀಯ ಸ್ಮೃತಿ ಸ್ಥಳದ ಸಮೀಪ ವಾಜಪೇಯಿ ಸಮಾಧಿ ನಿರ್ಮಾಣಗೊಂಡಿದೆ. ಇದೇ ಜಾಗದಲ್ಲಿ ಆಗಸ್ಟ್ 16ರಂದು ಅವರ ಅಂತ್ಯಸಂಸ್ಕಾರ ನೆರವೇರಿತ್ತು.
ವಾಜಪೇಯಿ ಜನ್ಮದಿನವನ್ನು ದೇಶದಾದ್ಯಂತ ಉತ್ತಮ ಆಡಳಿತ ದಿನವನ್ನಾಗಿ ಆಚರಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.