ಲಕ್ನೋ: ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನ ಅಂಗವಾಗಿ ಲಕ್ನೋದಲ್ಲಿ ಸುಮಾರು 150 ಯೋಜನೆಗಳಿಗೆ ಚಾಲನೆಯನ್ನು ನೀಡಿದರು.
ಲಕ್ನೋ ಲೋಕಸಭಾ ಕ್ಷೇತ್ರದ ಸಂಸದರೂ ಆಗಿರುವ ರಾಜನಾಥ್ ಸಿಂಗ್, ವಾಜಪೇಯಿಯವರ ಅಭಿವೃದ್ಧಿ ಹೊಂದಿದ ಲಕ್ನೋದ ಕನಸನ್ನು ನನಸಾಗಿಸುತ್ತ ಹೆಜ್ಜೆ ಇಟ್ಟಿರುವುದಾಗಿ ತಿಳಿಸಿದರು. ವಾಜಪೇಯಿ ಕೂಡ ಲಕ್ನೋ ಸಂಸದರಾಗಿದ್ದರು.
ಕಳೆದ 54 ತಿಂಗಳುಗಳಿಂದ ಲಕ್ನೋದಲ್ಲಿ ಸಾವಿರಾರು ಕೋಟಿ ಮೊತ್ತದ ಹಲವಾರು ಅಭಿವೃದ್ಧಿ ಯೋಜನೆಗಳು ಜರುಗುತ್ತಿವೆ ಎಂದು ತಿಳಿಸಿದರು.
ಪ್ರತಿ ವರ್ಷವೂ ಲಕ್ನೋದಲ್ಲಿ ವಾಜಪೇಯಿಯವರ ಜನ್ಮದಿನವನ್ನು ಆಚರಿಸಲಾಗುತ್ತದೆ. ಈ ಬಾರಿ ಅವರು ವಿಧಿವಶರಾದ ಹಿನ್ನಲೆಯಲ್ಲಿ ಅವರ ಸ್ಮರಣಾರ್ಥ ಜನ್ಮದಿನ ಆಚರಿಸಲಾಗುತ್ತಿದೆ. ಅವರ ದೂರದೃಷ್ಟಿಯಂತೆ ಲಕ್ನೋ ಇಂದು ತ್ವರಿತಗತಿಯಲ್ಲಿ ಪ್ರಗತಿ ಹೊಂದುತ್ತಿದೆ ಎಂದರು.
ಡಿ.25 ವಾಜಪೇಯಿ ಜನ್ಮದಿನವಾಗಿದ್ದು, ಉತ್ತಮ ಆಡಳಿತ ದಿನವನ್ನಾಗಿ ಆಚರಿಸಲಾಗಿದೆ.
source: ANI
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.