ಬೆಂಗಳೂರು: ಪ್ರತಿನಿತ್ಯ ಹಾಸ್ಟೇಲ್ ಫುಡ್ಗಳನ್ನು ತಪ್ಪಿಸಿಕೊಳ್ಳುವ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ ಶ್ರೀ ವೆಂಕಟೇಶ್ವರ ಎಂಜಿನಿಯರಿಂಗ್ ಕಾಲೇಜು, ಆ್ಯಪ್ವೊಂದನ್ನು ಹೊರ ತಂದಿದೆ. ಈ ಆ್ಯಪ್ನ್ನು ಬಳಕೆ ಮಾಡಿ ವಿದ್ಯಾರ್ಥಿಗಳು ಪೂರ್ವನಿಗದಿತ ಮೆನವಿನ ಪಟ್ಟಿಯಿಂದ ತಮಗಿಷ್ಟವಾದ ಆಹಾರವನ್ನು ಆರ್ಡರ್ ಮಾಡಿಕೊಳ್ಳಬಹುದಾಗಿದೆ. ಇದಕ್ಕಾಗಿ ಕಾಲೇಜು, ಮೂರು ಫುಡ್ ವೆಂಡರ್ಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ.
ತಮಗಿಷ್ಟವಿಲ್ಲದ ಆಹಾರವನ್ನು ಒದಗಿಸಲಾಗುತ್ತಿದೆ ಎಂದು ಆರೋಪಿಸಿ ನಿತ್ಯ ನೂರಾರು ವಿದ್ಯಾರ್ಥಿಗಳು ಊಟವನ್ನು ತ್ಯಜಿಸುತ್ತಿದ್ದರು. ಈ ಸಮಸ್ಯೆಯನ್ನು ಹೋಗಲಾಡಿಸುವ ಸಲುವಾಗಿ ಕಾಲೇಜು ಈ ಆ್ಯಪ್ನ್ನು ಹೊರತಂದಿದೆ.
ಕಾಲೇಜು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳನ್ನೊಳಗೊಂಡ ‘ಪ್ರೊಡಕ್ಟ್ ಡೆವಲಪ್ಮೆಂಟ್ ಟೀಮ್’ ಈ ಆ್ಯಪ್ನ್ನು ಅಭಿವೃದ್ಧಿಪಡಿಸಿದೆ.
ಈ ಆ್ಯಪ್ಗೆ ಎಂಟ್ರಿಯಾಗುತ್ತಿದ್ದಂತೆ, ಕಾಲೇಜು ಒಪ್ಪಂದ ಮಾಡಿಕೊಂಡಿರುವ ಮೂರು ಫುಡ್ ವೆಂಡರ್ಗಳಿಂದ ಮೆನುವಿನ ಪಾಪ್-ಅಪ್ ಬರುತ್ತದೆ. ವಿದ್ಯಾರ್ಥಿಗಳು ಇಲ್ಲಿ ತಮಗಿಷ್ಟವಾದುದನ್ನು ಆಯ್ಕೆ ಮಾಡಬಹುದು. ಒಂದು ದಿನ ಮುಂಚಿತವಾಗಿ ಆಯ್ಕೆ ಮಾಡಿಕೊಳ್ಳಬೇಕಾಗಿದೆ. ಈ ಆ್ಯಪ್ನಿಂದಾಗಿ ಹೆಚ್ಚು ವಿದ್ಯಾರ್ಥಿಗಳು ಆಹಾರವನ್ನು ತಿನ್ನುತ್ತಿದ್ದಾರೆ ಮತ್ತು ತ್ಯಾಜ್ಯದ ಪ್ರಮಾಣವೂ ಕಡಿಮೆಯಾಗುತ್ತಿದೆ ಎಂದು ಕಾಲೇಜು ಹೇಳಿದೆ.
source: timesofindia
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.