ಶಿಮ್ಲಾ: ಹಿಮಾಚಲಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚಿಸಿ ಒಂದು ವರ್ಷಗಳು ಪೂರೈಸುತ್ತಿದೆ. ಈ ಹಿನ್ನಲೆಯಲ್ಲಿ ಗುರುವಾರ ಸಮಾರಂಭವನ್ನು ಅಲ್ಲಿ ಏರ್ಪಡಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅದರಲ್ಲಿ ಭಾಗಿಯಾಗುತ್ತಿದ್ದಾರೆ.
ಒಂದು ವರ್ಷದಲ್ಲಿ ಬಿಜೆಪಿ ಮಾಡಿದ ಸಾಧನೆಗಳನ್ನು ಜನರ ಮುಂದೆ ತೆರೆದಿಡುವ ಸಲುವಾಗಿ ಸಮಾರಂಭವನ್ನು ಹಿಮಾಚಲಪ್ರದೇಶದ ಬಿಜೆಪಿ ಸರ್ಕಾರ ಆಯೋಜನೆಗೊಳಿಸಿದೆ.
ಮೋದಿಯವರು ಧರ್ಮಶಾಲಾದಲ್ಲಿ ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದು, ಬಳಿಕ ಜನರೊಂದಿಗೆ ಸರ್ಕಾರದ ವಿವಿಧ ಜನಪರ ಯೋಜನೆಗಳ ಬಗ್ಗೆ ಸಂವಾದ ನಡೆಸಲಿದಾರೆ. ಅಲ್ಲದೇ ಸರ್ಕಾರದ ಸಾಧನೆಗಳ ಪಟ್ಟಿಯನ್ನೊಳಗೊಂಡ ದಾಖಲೆಯನ್ನೂ ಅವರು ಬಿಡುಗಡೆ ಮಾಡುವ ನಿರೀಕ್ಷೆ ಇದೆ.
ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಹಿಮಾಚಲದಲ್ಲಿ ಬಿಜೆಪಿ ಜಯಭೇರಿ ಬಾರಿಸಿ, ಜೈ ರಾಮ್ ಠಾಕೂರ್ ನೇತೃತ್ವದಲ್ಲಿ ಸರ್ಕಾರ ರಚನೆ ಮಾಡಿತ್ತು.
ಒಂದು ವರ್ಷದಲ್ಲಿ ಬಿಜೆಪಿ ಮಾಡಿದ್ದು ಶೂನ್ಯ ಸಾಧನೆ ಎಂದು ಆರೋಪಿಸುತ್ತಾ ಬಂದಿರುವ ಕಾಂಗ್ರೆಸ್ಗೆ ಇಂದಿನ ಮೆಗಾ ರ್ಯಾಲಿಯ ಮೂಲಕ ಪ್ರತ್ಯುತ್ತರ ನೀಡಲು ಬಿಜೆಪಿ ಸಜ್ಜಾಗಿದೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.