ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿಯವರು, ಭಾರತದ ಗೋಡೆ ಎಂದೇ ಖ್ಯಾತರಾಗಿರುವ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿದ್ದ ಸುದೀರ್ಘ ಅವಧಿಯ ದಾಖಲೆಯೊಂದನ್ನು ಇಂದು ಪುಡಿಗಟ್ಟಿದ್ದಾರೆ.
ಒಂದು ಕ್ಯಾಲೆಂಡರ್ ವರ್ಷದಲ್ಲಿ ವಿದೇಶದಲ್ಲಿ ಅತೀಹೆಚ್ಚು ರನ್ಗಳಿಸಿದ ಭಾರತೀಯ ಕ್ರಿಕೆಟಿಗ ಎಂಬ ದಾಖಲೆಯನ್ನು ವಿರಾಟ್ ಕೊಹ್ಲಿ ನಿರ್ಮಿಸಿದ್ದಾರೆ. ಈ ಮೂಲಕ ದ್ರಾವಿಡ್ ಹೆಸರಿನಲ್ಲಿದ್ದ ದಾಖಲೆಯನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ.
ಮೆಲ್ಬೋರ್ನ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ನ ಎರಡನೇ ದಿನದಾಟದಲ್ಲಿ 82 ರನ್ಗಳನ್ನು ಪಡೆದುಕೊಳ್ಳುವ ಮೂಲಕ ಕೊಹ್ಲಿ ಈ ವರ್ಷ ವಿದೇಶಿ ನೆಲದಲ್ಲಿ 1,138 ರನ್ಗಳನ್ನು ಗಳಿಸಿದ್ದಾರೆ. 2002ರಲ್ಲಿ ದ್ರಾವಿಡ್ ಅವರು ವಿದೇಶದಲ್ಲಿ 1,137 ರನ್ ಗಳಿಸುವ ಮೂಲಕ ದಾಖಲೆ ನಿರ್ಮಿಸಿದ್ದರು.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.