ನವದೆಹಲಿ: ನ್ಯಾಷನಲ್ ರಿಜಿಸ್ಟಾರ್ ಆಫ್ ಸಿಟಿಜನ್ಸ್(ಎನ್ಆರ್ಸಿ)ಯನ್ನು ಪೂರ್ಣಗೊಳಿಸಲು ಅಸ್ಸಾಂಗೆ ನೀಡಿದ್ದ ಅವಧಿಯನ್ನು ಕೇಂದ್ರ ಸರ್ಕಾರ 6 ತಿಂಗಳುಗಳ ಕಾಲ ವಿಸ್ತರಿಸಿದೆ. 2019ರ ಜೂನ್ 30ರವರೆಗೆ ಸಮಯಾವಕಾಶ ನೀಡಿದೆ.
ಅಸ್ಸಾಂ ನಾಗರಿಕ ಪಟ್ಟಿ 2018ರ ಡಿ.31ರೊಳಗೆ ಪೂರ್ಣಗೊಳಿಸಲು ಸಾಧ್ಯವಿಲ್ಲದ ಕಾರಣ 6 ತಿಂಗಳ ವಿಸ್ತರಣೆಯನ್ನು ಮಾಡಲಾಗಿದೆ ಎಂದು ರಿಜಿಸ್ಟಾರ್ ಜನರಲ್ ಆಫ್ ಇಂಡಿಯಾ ಹೇಳಿದೆ.
ಅಕ್ರಮ ವಲಸಿಗರನ್ನು ಪತ್ತೆ ಹಚ್ಚುವ ಸಲುವಾಗಿ ಅಸ್ಸಾಂನಲ್ಲಿ ಎನ್ಆರ್ಸಿಯನ್ನು ಅನುಷ್ಠಾನಗೊಳಿಸಲಾಗಿದೆ. ನಾಗರಿಕರು ಇಲ್ಲಿ ತಮ್ಮ ದಾಖಲೆಗಳನ್ನು ಒದಗಿಸಿ ನಾಗರಿಕತ್ವವನ್ನು ಸಾಬೀತು ಮಾಡಬೇಕಾಗಿದೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.