ಬೆಂಗಳೂರು: ಅತ್ಯಂತ ದಕ್ಷ ಐಪಿಎಸ್ ಅಧಿಕಾರಿ ಎಂದೇ ಕರೆಯಲ್ಪಡುತ್ತಿದ್ದ ಮಧುಕರ್ ಶೆಟ್ಟಿಯವರು ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು.
ಎಚ್1 ಎನ್1 ಜ್ವರ ಮತ್ತು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಹೈದರಾಬಾದ್ನ ಕಾಂಟೆನೆಂಟಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಹಲೋಕ ತ್ಯಜಿಸಿದ್ದಾರೆ.
ಖ್ಯಾತ ಪತ್ರಕರ್ತ ವಡ್ಡರ್ಸೆ ರಘುರಾಮ್ ಶೆಟ್ಟಿಯವರ ಪುತ್ರರಾದ ಇವರು ಕುಂದಾಪುರ ಮೂಲದವರು. 1999ರ ಬ್ಯಾಚ್ನ ಐಪಿಎಸ್ ಅಧಿಕಾರಿ. ದೆಹಲಿಯ ಜೆಎನ್ಯುನಲ್ಲಿ ಸಮಾಜಶಾಸ್ತ್ರದಲ್ಲಿ ಎಂಎ ಪದವಿ ಮತ್ತು ನ್ಯೂಯಾರ್ಕ್ ವಿವಿಯಲ್ಲಿ ಪಿಎಚ್ಡಿ ಪದವಿ ಪಡೆದುಕೊಂಡಿದ್ದರು.
2008ರಲ್ಲಿ ಲೋಕಾಯುಕ್ತ ಸಂಸ್ಥೆಗೆ ಸೇರಿದ್ದ ಇವರು, ಅತ್ಯಂತ ಖಡಕ್ ಅಧಿಕಾರಿ ಎಂದೇ ಹೆಸರಾಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.