ಧಾಕಾ: ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಯಲ್ಲಿ ಸತತ ಮೂರನೇ ಬಾರಿಗೆ ಪ್ರಧಾನಿ ಶೇಖ್ ಹಸೀನಾ ಅವರು ಜಯಭೇರಿ ಬಾರಿಸಿದ್ದಾರೆ. ಅವರ ಪಕ್ಷ ಅವಾಮಿ ಲೀಗ್ ನೇತೃತ್ವದ ಮೈತ್ರಿ 300 ಸ್ಥಾನಗಳ ಪೈಕಿ 288 ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆಯನ್ನು ಏರಿದೆ.
ಹಸೀನಾ ವಿರುದ್ಧ ರಚನೆಯಾಗಿದ್ದ ವಿರೋಧಿ ಪಕ್ಷಗಳು ಕೇವಲ 6 ಸ್ಥಾನಗಳನ್ನು ಗೆದ್ದುಕೊಂಡಿವೆ. ಸ್ವತಂತ್ರ ಅಭ್ಯರ್ಥಿಗಳು ಕೆಲವೊಂದು ಸ್ಥಾನ ಗೆದ್ದಿದ್ದಾರೆ ಎನ್ನಲಾಗಿದೆ.
ಚುನಾವಣೆಯ ಸಂದರ್ಭ ನಡೆದ ಹಿಂಸಾಚಾರಗಳಿಂದಾಗಿ 17 ಮಂದಿ ಸಾವಿಗೀಡಾಗಿದ್ದಾರೆ. ಹೀಗಾಗೀ ಪ್ರತಿಪಕ್ಷಗಳು ಹೊಸದಾಗಿ ಚುನಾವಣೆಯನ್ನು ರಚನೆ ಮಾಡುವಂತೆ ಆಗ್ರಹಿಸುತ್ತಿವೆ. ಆಡಳಿತ ಪಕ್ಷ ಮತಗಳನ್ನು ತಿರುಚಿದೆ ಎಂಬ ಆರೋಪವನ್ನೂ ಇವುಗಳು ಮಾಡುತ್ತಿವೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.