ಜೈಪುರ: ರಾಜಸ್ಥಾನದ ವಿವಿಧ ಜಿಲ್ಲೆಗಳಲ್ಲಿ ಇತ್ತೀಚಿಗೆ ನಡೆದ ಸ್ಥಳಿಯಾಡಳಿತ ಉಪಚುನಾವಣೆಯಲ್ಲಿ ಬಿಜೆಪಿ 8 ಸ್ಥಾನಗಳನ್ನು ಜಯಿಸಿದೆ, ಕಾಂಗ್ರೆಸ್ 5ರಲ್ಲಿ ಜಯ ಗಳಿಸಿದೆ.
ಅಲ್ವರ್ನಲ್ಲಿ ಬಿಜೆಪಿ ಒಂದು ಜಿಲ್ಲಾ ಪಂಚಾಯತ್ ಸ್ಥಾನ ಮತ್ತು 13 ಪಂಚಾಯತ್ ಸಮಿತಿ ಸ್ಥಾನಗಳನ್ನು ಗೆದ್ದುಕೊಂಡಿದೆ, ಕಾಂಗ್ರೆಸ್ 5 ಪಂಚಾಯಿತಿ ಸ್ಥಾನಗಳನ್ನು ಪಡೆದುಕೊಂಡಿದೆ. 1 ಪಕ್ಷೇತರ ಅಭ್ಯರ್ಥಿ ಜಯಿಸಿದ್ದಾರೆ ಎಂದು ಅಲ್ಲಿನ ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.
ಅಕ್ಟೋಬರ್ನಲ್ಲಿ ನಡೆಯಬೇಕಾಗಿದ್ದ ಈ ಉಪಚುನಾವಣೆಯನ್ನು, ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಮುಂದೂಡಲಾಗಿತ್ತು. ಮೊನ್ನೆಯಷ್ಟೇ ಚುನಾವಣೆ ನಡೆಸಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.