ನವದೆಹಲಿ: ಕಳೆದ ಮೂರು ವರ್ಷಗಳಲ್ಲಿ, ರಕ್ಷಣಾ ವಲಯದ ಮೇಕ್ ಇನ್ ಇಂಡಿಯಾ ಯೋಜನೆಯಡಿಯಲ್ಲಿ ಮಿಲಿಟರಿ ಹಾರ್ಡ್ವೇರ್ಗಳನ್ನು ಉತ್ಪಾದಿಸುವ ಸಲುವಾಗಿ ರೂ.1.78 ಲಕ್ಷ ಕೋಟಿಯ 111 ಮಿಲಿಟರಿ ಪ್ರಾಜೆಕ್ಟ್ಗಳಿಗೆ ರಕ್ಷಣಾ ಸಚಿವಾಲಯ ಅನುಮೋದನೆಯನ್ನು ನೀಡಿದೆ.
ರಕ್ಷಣಾ ಸಚಿವಾಲಯದ ರಾಜ್ಯ ಖಾತೆ ಸಚಿವ ಸುಭಾಶ್ ಭಮ್ರೆ ಅವರು ಈ ಬಗ್ಗೆ ಲೋಕಸಭೆಗೆ ಮಾಹಿತಿಯನ್ನು ನೀಡಿದ್ದು, 2015-18ರವರೆಗೆ ಸರ್ಕಾರ, ರೂ 1.78 ಲಕ್ಷ ಕೋಟಿ ಮೊತ್ತದ 111 ಪ್ರಾಜೆಕ್ಟ್ಗಳಿಗೆ ಅನುಮೋದನೆ ನೀಡಿದೆ ಎಂದಿದ್ದಾರೆ.
ಇದೇ ಅವಧಿಯಲ್ಲಿ, ರಕ್ಷಣಾ ಪರಿಕರಗಳ ಖರೀದಿಗೆ ಸಂಬಂಧಿಸಿದಂತೆ ರೂ.64,471.28 ಕೋಟಿಯ 99 ಕಾಂಟ್ರ್ಯಾಕ್ಟ್ಗಳಿಗೆ ಭಾರತೀಯ ವ್ಯಾಪಾರಿಗಳೊಂದಿಗೆ ಸಹಿ ಮಾಡಲಾಗಿದೆ ಎಂದಿದ್ದಾರೆ.
ರಕ್ಷಣಾ ವಲಯದಲ್ಲಿ ಮೇಕ್ ಇನ್ ಇಂಡಿಯಾ ಯೋಜನೆ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲೊಂದಾಗಿದೆ. ಇದರಡಿಯಲ್ಲಿ ಹೆಲಿಕಾಫ್ಟರ್, ಫೈಟರ್ ಏರ್ಕ್ರಾಫ್ಟ್, ಸಬ್ಮರೀನ್ಗಳನ್ನು ಮುಂಬರುವ ದಿನಗಳಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.