ನವದೆಹಲಿ: ಬಾಲಿವುಡ್ನ ಖ್ಯಾತ ನಟಿ ಮೌಶುಮಿ ಚ್ಯಾಟರ್ಜಿಯವರು, ಬುಧವಾರ ನವದೆಹಲಿಯಲ್ಲಿ ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಇವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
1960 ಮತ್ತು 1970ರ ಹಿಂದಿ ಮತ್ತು ಬೆಂಗಾಳಿಯ ಸಾಕಷ್ಟು ಸಿನಿಮಾಗಳಲ್ಲಿ ಇವರು ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿ ಕೋಲ್ಕತ್ತಾದ ಈಶಾನ್ಯ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ನಲ್ಲಿ ಇವರು ಸ್ಪರ್ಧಿಸಿದ್ದರು.
2019ರ ಚುನಾವಣೆಯಲ್ಲಿ ಇವರು ಬಿಜೆಪಿ ಟಿಕೆಟ್ನಿಂದ ಸ್ಪರ್ಧಿಸಲಿದ್ದಾರೆ ಎಂದು ವಿಜಯವರ್ಗೀಯ ಖಚಿತಪಡಿಸಿದ್ದಾರೆ.
ಪಶ್ಚಿಮಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರ ಟಿಎಂಸಿ ಮತ್ತು ಎಡಪಕ್ಷಗಳಿಗೆ ಪರ್ಯಾಯ ಶಕ್ತಿಯಾಗಿ ಬೆಳೆಯುವ ಅದಮ್ಯ ಉತ್ಸಾಹದಲ್ಲಿರುವ ಬಿಜೆಪಿ, ಅಲ್ಲಿನ ಖ್ಯಾತನಾಮರನ್ನು ತನ್ನತ್ತ ಬರಮಾಡಿಕೊಳ್ಳುತ್ತಿದೆ.
ಮಹಾಭಾರತದಲ್ಲಿ ದ್ರೌಪದಿಯಾಗಿ ನಟಿಸಿ ಖ್ಯಾತಿ ಪಡೆದುಕೊಂಡಿದ್ದ ನಟಿ ರೂಪಾ ಗಂಗೂಲಿ ಈಗಾಗಲೇ ಬಿಜೆಪಿ ಸೇರಿ, ರಾಜ್ಯಸಭೆಗೆ ಆಯ್ಕೆಗೊಂಡಿದ್ದಾರೆ.
source: ndtv
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.