ನವದೆಹಲಿ: ವಿಶ್ವ ನಾಯಕರಾಗಿ ಹೊರಹೊಮ್ಮಿರುವ ಪ್ರಧಾನಿ ನರೇಂದ್ರ ಮೋದಿಯವರ ಜೀವನಾಧಾರಿತ ಸಿನಿಮಾ ಶೀಘ್ರದಲ್ಲೇ ನಿರ್ಮಾಣಗೊಳ್ಳಲಿದೆ. ಈ ಸಿನಿಮಾದಲ್ಲಿ ಮೋದಿಯಾಗಿ ಖ್ಯಾತ ಬಾಲಿವುಡ್ ನಟ ವಿವೇಕ್ ಒಬೇರಾಯ್ ಮಿಂಚಲಿದ್ದಾರೆ.
ಖ್ಯಾತ ಸಿನಿಮಿ ವಿಶ್ಲೇಷಕ ತರಣ್ ಆದರ್ಶ್ ಅವರು ಈ ವಿಷಯವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ. ‘ಪಿಎಂ ನರೇಂದ್ರ ಮೋದಿ’ ಸಿನಿಮಾದ ಶೀರ್ಷಿಕೆಯಾಗಲಿದೆ.
IT’S OFFICIAL… Vivekanand Oberoi [Vivek Oberoi] to star in Narendra Modi biopic, titled #PMNarendraModi… Directed by Omung Kumar… Produced by Sandip Ssingh… First look poster will be launched on 7 Jan 2019… Filming starts mid-Jan 2019.
— taran adarsh (@taran_adarsh) January 4, 2019
ಮೇರಿಕೋಮ್, ಭೂಮಿ ಸಿನಿಮಾವನ್ನು ನಿರ್ದೇಶಿಸಿರುವ ಒಮಂಗ್ ಕುಮಾರ್ ಸಿನಿಮಾವನ್ನು ನಿರ್ದೇಶಿಸಲಿದ್ದಾರೆ. ಸಂದೀಪ್ ಸಿಂಗ್ ನಿರ್ಮಾಣ ಮಾಡಲಿದ್ದಾರೆ. ಇದೇ ಜನವರಿ 7ರಂದು ಚಿತ್ರದ ಮೊದಲ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಲಿದೆ.
ನಮ್ಮ ದೇಶದಲ್ಲಿ ಜೀವನಾಧಾರಿತ ಸಿನಿಮಾಗಳಿಗೆ ಹೆಚ್ಚಿನ ವೀಕ್ಷಕರಿದ್ದಾರೆ. ಅದು ಕೂಡ ಅತ್ಯಧಿಕ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿರುವ ಮೋದಿ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಾಣುವುದರಲ್ಲಿ ಸಂಶಯವಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.