ಅಹ್ಮದಾಬಾದ್: ವಿಶ್ವದ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಭಾರತದಲ್ಲೇ ನಿರ್ಮಾಣವಾಗುತ್ತಿದೆ. ಗುಜರಾತಿನ ಅಹ್ಮದಾಬಾದ್ ಸಮೀಪದ ಮೊಟೆರಾದಲ್ಲಿ ಮೆಲ್ಬೋರ್ನ್ ಕ್ರಿಕೆಟ್ ಮೈದಾನಕ್ಕಿಂತಲೂ ಅತೀ ದೊಡ್ಡದಾಗಿರುವ ಸ್ಟೇಡಿಯಂ ನಿರ್ಮಾಣಗೊಳ್ಳುತ್ತಿದೆ. ಗುಜರಾತ್ ಕ್ರಿಕೆಟ್ ಅಸೋಸಿಯೇಶನ್ನ ಕನಸಿನ ಯೋಜನೆ ಇದಾಗಿದ್ದು, ಭಾರತದ ಹೆಮ್ಮೆ ಎನಿಸಿಕೊಳ್ಳುವುದರಲ್ಲಿ ಎರಡು ಮಾತಿಲ್ಲ.
63 ಎಕರೆ ಭೂಪ್ರದೇಶದಲ್ಲಿ, 700 ಕೋಟಿ ರೂಪಾಯಿ ವೆಚ್ಚದಲ್ಲಿ ಇದು ನಿರ್ಮಾಣಗೊಳ್ಳುತ್ತಿದ್ದು, 1.10 ಲಕ್ಷ ಕ್ರಿಕೆಟ್ ಅಭಿಮಾನಿಗಳು ಕುಳಿತುಕೊಳ್ಳುವಷ್ಟು ಆಸನ ವ್ಯವಸ್ಥೆಯನ್ನು ಹೊಂದಿರಲಿದೆ. 2017 ರಿಂದ ಇದರ ನಿರ್ಮಾಣ ಕಾರ್ಯ ಆರಂಭಗೊಂಡಿದ್ದು, ಒಂದೆರಡು ವರ್ಷಗಳಲ್ಲಿ ಸಂಪೂರ್ಣ ಸಜ್ಜಾಗುವ ನಿರೀಕ್ಷೆ ಇದೆ.
ಗುಜರಾತ್ ಕ್ರಿಕೆಟ್ ಅಸೋಸಿಯೇಶನ್ ಉಪಾಧ್ಯಕ್ಷ ಪರಿಮಳ್ ನತ್ವಾನಿ ಕ್ರೀಡಾಂಗಣದ ಕಾಮಗಾರಿಯ ಬಗ್ಗೆ ಟ್ವಿಟರ್ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಈಗಾಗಲೇ ವಿಶ್ವದ ಅತೀ ಎತ್ತರದ ಪ್ರತಿಮೆಯನ್ನು ಹೊಂದಿರುವ ಗುಜರಾತ್, ಶೀಘ್ರದಲ್ಲೇ ವಿಶ್ವದ ಅತೀದೊಡ್ಡ ಕ್ರಿಕೆಟ್ ಸ್ಟೇಡಿಯಂನ್ನು ಹೊಂದಿದ ಹಿರಿಮೆಗೂ ಪಾತ್ರವಾಗಲಿದೆ.
World’s Largest Cricket Stadium, larger than #Melbourne, is under construction at #Motera in #Ahmedabad,#Gujarat. Once completed the dream project of #GujaratCricketAssociation will become pride of entire India. Sharing glimpses of construction work under way. @BCCI @ICC #cricket pic.twitter.com/WbeoCXNqRJ
— Parimal Nathwani (@mpparimal) January 6, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.