ನವದೆಹಲಿ: ರಫೆಲ್ ಯುದ್ಧ ವಿಮಾನದ ಬಗ್ಗೆ ನಿರಂತರ ಅಪಪ್ರಚಾರಗಳನ್ನು ನಡೆಸುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿಯನ್ನು ನಡೆಸಿದ್ದು, ರಾಹುಲ್ ನಡೆ ವಾಣಿಜ್ಯ ಉದ್ದೇಶದಿಂದ ಕೂಡಿದೆ ಎಂದು ಆರೋಪಿಸಿದೆ.
ಆಗಸ್ಟಾ ವೆಸ್ಟ್ ಲ್ಯಾಂಡ್ ಪ್ರಕರಣದ ಮಧ್ಯವರ್ತಿ ಕ್ರಿಶ್ಚಿಯನ್ ಮಿಶೆಲ್ ಅಣತಿಯಂತೆ ರಾಹುಲ್ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದೆ.
‘ಆಗಸ್ಟಾ ವೆಸ್ಟ್ ಲ್ಯಾಂಡ್ ಪ್ರಕರಣದಲ್ಲಿದ್ದ ಕೆಲ ಮಧ್ಯವರ್ತಿಗಳು, ಯುರೋಫೈಟರ್ ಡೀಲ್ನ್ನು ಪಡೆಯಲು ಮುಂದಾಗಿದ್ದರು. ಈಗ ಅದರಲ್ಲೊಬ್ಬ ಜೈಲಿನಲ್ಲಿದ್ದಾನೆ’ ಎಂದು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೂಡ ಕಾಂಗ್ರೇಸ್ ಮಾಡಿರುವ ಎಲ್ಲಾ ಆರೋಪವನ್ನು ನಿರಾಕರಿಸಿದ್ದು, ರಾಹುಲ್ ಸುಳ್ಳು ಹೇಳಿ ದೇಶವನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಸತ್ಯವನ್ನು ಕೇಳಲು ಅವರು ಸಿದ್ಧರಿಲ್ಲ, ಅವರು ಸತ್ಯಕ್ಕೆ ಅಂಜುತ್ತಿದ್ದಾರೆ ಎಂದಿದ್ದಾರೆ.
ಇನ್ನೊಂದೆಡೆ, ರಾಹುಲ್ ಆರೋಪದ ಹಿಂದೆ ವಿದೇಶಿ ಒತ್ತಡವಿದೆ, ವಾಣಿಜ್ಯ ಹಿತಾಸಕ್ತಿ ಇದೆ ಎಂದು ಬಿಜೆಪಿ ಬಲವಾಗಿ ಆರೋಪಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.