ನವದೆಹಲಿ: ಅಯೋಧ್ಯೆಯ ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದವನ್ನು ವಿಚಾರಣೆ ನಡೆಸುವ ಸಲುವಾಗಿ ಸುಪ್ರೀಂಕೋರ್ಟ್ ಮಂಗಳವಾರ ಐವರು ನ್ಯಾಯಾಧೀಶರನ್ನು ಒಳಗೊಂಡ ಸಾಂವಿಧಾನಿಕ ಪೀಠವನ್ನು ರಚಿಸಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ಅವರು ಪೀಠದ ನೇತೃತ್ವವನ್ನು ವಹಿಸಲಿದ್ದು, ನ್ಯಾ.ಎಸ್.ಎ ಬೊಬ್ಡೆ, ಎನ್.ವಿ ರಮಣ, ಯು ಯು ಲಲಿತ್ ಮತ್ತು ಡಿವೈ ಚಂದ್ರಚೂಡ ಸದಸ್ಯರಾಗಿರಲಿದ್ದಾರೆ.
ಜನವರಿ 10ರಂದು ಬೆಳಗ್ಗೆ 10.30ರಿಂದ ಈ ಸಾಂವಿಧಾನಿಕ ಪೀಠ ಅಯೋಧ್ಯಾ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.
2010ರಲ್ಲಿ ಅಲಹಾಬಾದ್ ಹೈಕೋರ್ಟ್ ಅಯೋಧ್ಯಾ ವಿಷಯದಲ್ಲಿ ನೀಡಿದ ತೀರ್ಪನ್ನು ವಿರೋಧಿಸಿ ಸುಪ್ರೀಂಕೋರ್ಟ್ಗೆ 14 ಮೇಲ್ಮನವಿಗಳು ಸಲ್ಲಿಕೆಯಾಗಿದೆ.
ಸುನ್ನಿ ವಕ್ಫ್ ಮಂಡಳಿ, ನಿರ್ಮೊಹಿ ಅಖಾರ, ರಾಮಲಲ್ಲಾ-ಈ ಮೂರು ತಂಡಗಳಿಗೆ 2.77 ಎಕರೆ ಅಯೋಧ್ಯಾ ಭೂಮಿಯನ್ನು ಸಮಾನವಾಗಿ ಹಂಚುವಂತೆ ಹೈಕೋರ್ಟ್ ತೀರ್ಪು ನೀಡಿತ್ತು. ಆದರೆ ಇದನ್ನು ಮೂರೂ ಕಡೆಯ ಅರ್ಜಿದಾರರು ವಿರೋಧಿಸಿ ಸುಪ್ರೀಂ ಮೆಟ್ಟಿಲೇರಿದ್ದಾರೆ.
ಕಳೆದ ಅಕ್ಟೋಬರ್ನಲ್ಲಿ ಸುಪ್ರೀಂ, ಈ ವಿಚಾರಣೆಯನ್ನು ಜನವರಿ ಮೊದಲ ವಾರಕ್ಕೆ ಮುಂದೂಡಿತ್ತು.
source: hinduthantimes
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.