ನವದೆಹಲಿ: ನಮಾಮಿ ಗಂಗೆ, ಜಲಾಂಶ್ಗಳ ಬಳಿಕ ಇದೀಗ ನೀರಿನ ಸಂರಕ್ಷಣೆ, ನೀರು ಮರುಬಳಕೆ, ಕಸದಿಂದ ರಸವನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಜಲ ಸಂಪನ್ಮೂಲ ಸಚಿವಾಲಯವು ’ಜಲ್ ಚರ್ಚಾ’ ಎಂಬ ಮಾಸಿಕ ನಿಯತಕಾಲಿಕೆಯನ್ನು ಹೊರತಂದಿದೆ.
ನಿಯತಕಾಲಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು, ‘ನೀರಿನ ವಲಯ ಯಶಸ್ಸಿಗೆ ಸಹಕಾರ, ಸಂಯೋಜಕತ್ವ ಮತ್ತು ಸಂವಹನಗಳು ಅತ್ಯಂತ ಪ್ರಮುಖವಾಗಿದೆ. ಎನ್ ಜಿಓ, ಸಾಮಾಜಿಕ ಸಂಘಟನೆಗಳು ಮತ್ತು ರಾಜ್ಯಗಳು ನೀರಿನ ಸಂರಕ್ಷಣೆಯ ವಿಷಯದಲ್ಲಿ ಅತ್ಯಂತ ಗಂಭೀರವಾಗಿ ಪಾಲ್ಗೊಳ್ಳುವ ಅವಶ್ಯಕತೆ ಇದೆ’ ಎಂದು ಪ್ರತಿಪಾದಿಸಿದರು.
‘ನೀರಿನ ಸಂರಕ್ಷಣೆಯ ಬಗ್ಗೆ ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಮುಂತಾದ ಕಡೆಗಳಲ್ಲಿ ತೆಗೆದುಕೊಳ್ಳಲಾದ ಕ್ರಮಗಳು ಸಕಾರಾತ್ಮಕ ಫಲಿತಾಂಶವನ್ನು ನೀಡಿದೆ. ಜನರ ಸಾಮಾಜಿಕ ಆರ್ಥಿಕ ಪರಿಸ್ಥಿತಿಗಳನ್ನು ಸುಧಾರಿಸಿದೆ’ ಎಂದಿದ್ದಾರೆ.
ಹೊರತರಲಾದ ನಿಯತಕಾಲಿಕೆ ‘ಜಲ್ ಚರ್ಚಾ’ ನೀರಿನ ಸಂರಕ್ಷಣೆಯ ಬಗ್ಗೆ ಜಾಗೃತಿ, ಅರಿವು ಮೂಡಿಸುವಲ್ಲಿ ಸಹಕಾರಿಯಾಗಲಿದೆ ಎಂದು ಅವರು ಅಭಿಪ್ರಾಯಿಸಿದ್ದಾರೆ.
source: newsbharati
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.