ನವದೆಹಲಿ: ಕೇಂದ್ರ ಯುವಜನ ಮತ್ತು ಕ್ರೀಡಾ ಸಚಿವಾಲಯ ಆಯೋಜನೆಗೊಳಿಸುತ್ತಿರುವ ಖೇಲೋ ಇಂಡಿಯಾ ಯೂತ್ ಗೇಮ್ಸ್ನ ಎರಡನೇ ಆವೃತ್ತಿ ಮಹಾರಾಷ್ಟ್ರದ ಪುಣೆಯಲ್ಲಿ ಇಂದಿನಿಂದ ಆರಂಭಗೊಳ್ಳುತ್ತಿದೆ.
ಇಂದು ಸಂಜೆ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಮತ್ತು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು, ಶ್ರೀ ಶಿವ ಛತ್ರಪತಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ಜ್ಯೋತಿಯನ್ನು ಬೆಳಗಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಲಿದ್ದಾರೆ. ವೀಡಿಯೋ ಸಂದೇಶದ ಮೂಲಕ ಮೋದಿ ಸಭಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಒಟ್ಟು 18 ಕ್ರೀಡೆಗಳು ಈ ಕ್ರೀಡಾಕೂಟದಲ್ಲಿ ಜರುಗಲಿದ್ದು, ವಿವಿಧ ರಾಜ್ಯಗಳ 9 ಸಾವಿರ ಮಂದಿ ಆಟಗಾರರು ಇದರಲ್ಲಿ ಭಾಗಿಯಾಗುತ್ತಿದ್ದಾರೆ.
ಈ ಪಂದ್ಯಕ್ಕಾಗಿನ ಹಾಕಿ ಟೂರ್ನಮೆಂಟ್ ಸೋಮವಾರದಿಂದಲೇ ಮುಂಬಯಿಯಲ್ಲಿ ನಡೆಯುತ್ತಿದೆ.
ಯುವ ಜನರಲ್ಲಿ ಕ್ರೀಡೆಯ ಬಗ್ಗೆ ಆಸಕ್ತಿಯನ್ನು ಮೂಡಿಸುವುದು, ಕ್ರೀಡಾಳುಗಳಿಗೆ ಉತ್ತಮ ವೇದಿಕೆಯನ್ನು ಕಲ್ಪಿಸಿಕೊಡುವ ಸಲುವಾಗಿ ಖೇಲೋ ಇಂಡಿಯಾ ಯೂತ್ ಗೇಮ್ಸ್ನ್ನು ಆಯೋಜನೆಗೊಳಿಸಲಾಗುತ್ತಿದೆ.
source: newsonair.com
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.