ನವದೆಹಲಿ: ಐಪಿಎಲ್ ಹಗರಣ ಆರೋಪಿ ಲಲಿತ್ ಮೋದಿ ವಿವಾದದಲ್ಲಿ ಸಿಲುಕಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ನಿವಾಸದ ಮುಂದೆ ಶನಿವಾರ ಎಎಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಎಎಪಿ ಯುವ ಘಟಕದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಸುಷ್ಮಾ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಅಲ್ಲದೇ ಅವರು ರಾಜೀನಾಮೆ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಪ್ರತಿಭಟನೆ ತೀವ್ರ ಸ್ವರೂಪ ಪಡೆಯದಂತೆ ಪೊಲೀಸರನ್ನು ನಿಯೋಜಿಸಲಾಗಿದೆ.
ಲಲಿತ್ ಮೋದಿ ವೀಸಾ ಪಡೆಯಲು ಸುಷ್ಮಾ ನೆರವು ನೀಡಿದ್ದಾರೆ ಎಂಬ ಆರೋಪವಿದೆ. ಹೀಗಾಗಿ ಅವರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್, ಎಎಪಿ ಸೇರಿದಂತೆ ವಿವಿಧ ಪಕ್ಷಗಳು ಆಗ್ರಹಿಸಿವೆ.
ಆದರೆ ಬಿಜೆಪಿ ಸುಷ್ಮಾ ಬೆಂಬಲಕ್ಕೆ ನಿಂತಿದ್ದು, ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.