ನವದೆಹಲಿ: ಭಾರತದ ಹೆಮ್ಮೆಯ ಬಾಕ್ಸರ್ ಮೇರಿ ಕೋಮ್ ಅವರು, ಇಂಟರ್ನ್ಯಾಷನಲ್ ಬಾಕ್ಸಿಂಗ್ ಅಸೋಸಿಯೇಶನ್ನ ವಿಶ್ವ ರ್ಯಾಂಕಿಂಗ್ನಲ್ಲಿ ನಂಬರ್.1 ಸ್ಥಾನವನ್ನು ಪಡೆದುಕೊಂಡಿದ್ದಾರೆ.
6ನೇ ಸ್ಥಾನದಲ್ಲಿದ್ದ ಅವರು 1700 ಪಾಯಿಂಟ್ಗಳ ಮೂಲಕ ವಿಶ್ವ ನಂಬರ್ 1 ಪಟ್ಟಕ್ಕೆ ಜಿಗಿದಿದ್ದಾರೆ.
ಕಳೆದ ನವೆಂಬರ್ನಲ್ಲಿ ದೆಹಲಿಯಲ್ಲಿ ನಡೆದ ವರ್ಲ್ಡ್ ಚಾಂಪಿಯನ್ಶಿಪ್ನ 48 ಕೆಜಿ ವಿಭಾಗದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮುವ ಮೂಲಕ ಮೇರಿ ಕೋಮ್ ಮಹತ್ವದ ಸಾಧನೆಯನ್ನು ಮಾಡಿದ್ದರು. 600 ಪಾಯಿಂಟ್ಗಳ ಮೂಲಕ ಅವರು ಉಕ್ರೇನ್ ಆಟಗಾರ್ತಿಯನ್ನು ಪರಾಭವಗೊಳಿಸಿದ್ದರು.
ಸತತ ಐದು ವಿಶ್ವ ಚಾಂಪಿಯನ್ಶಿಪ್ ಪಟ್ಟ ಗಿಟ್ಟಿಸಿಕೊಂಡ ಸಾಧನೆ ಮಾಡಿರುವ ಈಕೆ, 2012ರ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಜಯಿಸಿದ್ದಾರೆ.
ಇವರು ಭಾರತದ ಬಾಕ್ಸಿಂಗ್ ಐಕಾನ್ ಮಾತ್ರವಲ್ಲ, ದೃಢತೆ ಮತ್ತು ಬಲಿಷ್ಠತೆಗೆ ಉದಾಹರಣೆಯೂ ಆಗಿದ್ದಾರೆ. ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿಗಳ ಹಿರಿಮೆ ಇವರಿಗಿದೆ. ರಾಜ್ಯಸಭಾ ಸಂಸದರೂ ಆಗಿದ್ದಾರೆ.
source: newsbharathi
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.