ನವದೆಹಲಿ: ವಿದೇಶಿ ನೆಲದಲ್ಲಿ ಭಾರತದ ಬಗ್ಗೆ ಮಾತನಾಡುವಾಗ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ದೇಶದ ಘನತೆಯನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಬಿಜೆಪಿ ಮುಖಂಡ ಶಹನವಾಝ್ ಹುಸೇನ್ ಹೇಳಿದ್ದಾರೆ.
ದುಬೈನಲ್ಲಿ ರಾಹುಲ್ ಅವರು ಪ್ರಧಾನಿಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಮತ್ತು ಕಳೆದ ನಾಲ್ಕು ವರ್ಷಗಳಿಂದ ದೇಶದಲ್ಲಿ ಅಸಹಿಷ್ಣುತೆ ಹೆಚ್ಚಾಗಿದೆ ಎನ್ನುವ ಮೂಲಕ ದೇಶದ ಘನತೆಗೆ ಧಕ್ಕೆ ತಂದಿದ್ದಾರೆ ಎಂದು ಶಹನವಾಝ್ ಆರೋಪಿಸಿದ್ದಾರೆ.
‘ವಿದೇಶಿ ನೆಲದಲ್ಲಿ ಮಾತನಾಡುವಾಗ ತಾನು ಯಾವುದೇ ರಾಜಕಾರಣಿ ಅಥವಾ ರಾಜಕೀಯ ಪಕ್ಷದ ಬಗ್ಗೆ ಮಾತನಾಡುತ್ತಿಲ್ಲ, ದೇಶದ ಪ್ರಧಾನಿಗಳ ಬಗ್ಗೆ ಮಾತನಾಡುತ್ತಿದ್ದೇನೆ ಎಂದು ರಾಹುಲ್ ಅರ್ಥಮಾಡಿಕೊಳ್ಳಬೇಕು. ಅಸಹಿಷ್ಣುತೆಯಂತಹ ಹೇಳಿಕೆಗಳನ್ನು ಅವರು ನೀಡಿದ್ದು ಶೋಭೆ ತರುವುದಿಲ್ಲ. ಅಂತಹ ಹೇಳಿಕೆಗಳು ಭಾರತೀಯರ ಭಾವನೆಗೆ ನೋವುಂಟು ಮಾಡುತ್ತದೆ’ ಎಂದಿದ್ದಾರೆ.
ಅಲ್ಲದೇ, ಅಗೌರವದ ಮಾತುಗಳನ್ನಾಡಿದ ಕಾಂಗ್ರೆಸ್ಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನರೇ ಪಾಠ ಕಲಿಸಲಿದ್ದಾರೆ ಎಂದಿದ್ದಾರೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.