ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ 72ಕ್ಕೂ ಅಧಿಕ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಸಮಾಜವಾದಿ ಮತ್ತು ಬಹುಜನ ಸಮಾಜವಾದಿ ಪಕ್ಷಗಳ ಮೈತ್ರಿಯ ಬಗ್ಗೆ ಮಾತನಾಡಿದ ಅವರು, 2017ರ ವಿಧಾನಸಭಾ ಚುನಾವಣೆಯಲ್ಲಿ ಏನಾಯಿತು ಎಂಬುದನ್ನು ಅವರು ಮರೆತಿದ್ದಾರೆ ಎಂದಿದ್ದಾರೆ.
‘2017ರ ಚುನಾವಣೆಯಲ್ಲಿ ಏನಾಯಿತು ಎಂಬುದನ್ನು ಅವರು ಮರೆತರೆ? ಅವರಿಗೆ ಎಷ್ಟು ಬೇಕೋ ಅಷ್ಟು ಮೈತ್ರಿಯನ್ನು ಮಾಡಿಕೊಳ್ಳಬಹುದು, ಆದರೆ ಯಪಿಯಲ್ಲಿ 72ಕ್ಕಿಂತ ಕಡಿಮೆ ಸ್ಥಾನವನ್ನು ಬಿಜೆಪಿ ಗೆಲ್ಲಲಾರದು’ ಎಂದಿದ್ದಾರೆ.
ಉತ್ತರಪ್ರದೇಶದಲ್ಲಿ ಸಮಾಜವಾದಿ ಮತ್ತು ಬಹುಜನ ಸಮಾಜವಾದಿ ಪಕ್ಷಗಳು 2019ರ ಚುನಾವಣೆಗೆ ತಮ್ಮ ಮೈತ್ರಿಯನ್ನು ಘೋಷಣೆ ಮಾಡಿವೆ. 80 ಲೋಕಸಭಾ ಸ್ಥಾನಗಳಿರುವ ಯುಪಿಯಲ್ಲಿ ತಲಾ 38 ಸ್ಥಾನಗಳನ್ನು ಹಂಚಿಕೊಳ್ಳಲು ಇವುಗಳು ನಿರ್ಧರಿಸಿವೆ. ಈ ಪಕ್ಷಗಳ ನಿರ್ಧಾರದಿಂದ ತಮಗೆ ಯಾವ ಆತಂಕವೂ ಇಲ್ಲ ಎಂದು ಬಿಜೆಪಿ ಹೇಳಿದೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.