ನವದೆಹಲಿ: 7ನೇ ವೇತನಾ ಆಯೋಗದ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರ ಸರ್ಕಾರಿ ಮತ್ತು ಅನುದಾನಿತ ತಾಂತ್ರಿಕ ಸಂಸ್ಥೆಗಳ ಶಿಕ್ಷಕರಿಗೂ ವಿಸ್ತರಣೆ ಮಾಡಿದ್ದು, ಇದಕ್ಕಾಗಿ ರೂ.1,241 ಕೋಟಿಗಳನ್ನು ಬಿಡುಗಡೆಗೊಳಿಸಿದೆ.
‘ಸರ್ಕಾರದ ಈ ನಿರ್ಧಾರದಿಂದಾಗಿ ಒಟ್ಟು 29,264 ಸರ್ಕಾರಿ ಮತ್ತು ಅನುದಾನಿತ ಸಂಸ್ಥೆಗಳ ತಾಂತ್ರಿಕ ಶಿಕ್ಷಕರಿಗೆ ಸಹಾಯವಾಗುತ್ತದೆ. ಇದರೊಂದಿಗೆ, ಖಾಸಗಿ ಕಾಲೇಜು ಅಥವಾ ಸಂಸ್ಥೆಗಳ 3.5 ಲಕ್ಷ ಶಿಕ್ಷಕರು ಮತ್ತು ಶೈಕ್ಷಣಿಕ ಸಿಬ್ಬಂದಿಗಳು ಆಲ್ ಇಂಡಿಯಾ ಕೌನ್ಸಿಲ್ ಆಫ್ ಟೆಕ್ನಿಕಲ್ ಎಜುಕೇಶನ್ನಡಿ ಪ್ರಯೋಜನವನ್ನು ಪಡೆದುಕೊಳ್ಳಲಿದ್ದಾರೆ’ ಎಂದು ಎಚ್ಆರ್ಡಿ ಸಚಿವ ಪ್ರಕಾಶ್ ಜಾವ್ಡೇಕರ್ ತಿಳಿಸಿದ್ದಾರೆ.
‘7ನೇ ವೇತನಾ ಆಯೋಗದ ಅನುಷ್ಠಾನಗಳಿಗೆ ಸಂಬಂಧಿಸಿದಂತೆ ಈ ಸಂಸ್ಥೆಗಳಿಗೆ ಪಾವತಿಸಬೇಕಾದ ಹೆಚ್ಚುವರಿ ವೆಚ್ಚದ ಶೇ.50ರಷ್ಟನ್ನು ಕೇಂದ್ರ ಸರ್ಕಾರ ಪಾವತಿ ಮಾಡಲಿದೆ’ ಎಂದಿದ್ದಾರೆ.
ಸರ್ಕಾರದ ಈ ನಿರ್ಧಾರದಿಂದ ತಾಂತ್ರಿಕ ಸಂಸ್ಥೆಗಳು ತಮ್ಮ ಸಂಸ್ಥೆಯನ್ನು ಉನ್ನತ ಗುಣಮಟ್ಟದಲ್ಲಿ ಇರಿಸಲು ಸಾಧ್ಯವಾಗುತ್ತದೆ ಎಂದಿದ್ದಾರೆ.
source: www.indiatoday.in
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.