ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿಯವರು ಇಂದಿನಿಂದ ಮೂರು ದಿನಗಳ ಗುಜರಾತ್ ಪ್ರವಾಸವನ್ನು ಹಮ್ಮಿಕೊಳ್ಳುತ್ತಿದ್ದು, ಗಾಂಧೀನಗರದಲ್ಲಿ ‘ವೈಬ್ರಂಟ್ ಗುಜರಾತ್ ಗ್ಲೋಬಲ್ ಟ್ರೇಡ್ ಶೋ’ವನ್ನು ಉದ್ಘಾಟಿಸಲಿದ್ದಾರೆ. ಈ ಟ್ರೇಡ್ ಶೋನಲ್ಲಿ 25 ಇಂಡಸ್ಟ್ರಿಯಲ್ ಮತ್ತು ಬ್ಯುಸಿನೆಸ್ ಸೆಕ್ಟರ್ಗಳು ಒಂದೇ ಸೂರಿನಡಿ ಬರಲಿವೆ.
ಅಲ್ಲದೇ ಮೋದಿ, ಅಹ್ಮದಾಬಾದ್ನಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಸರ್ದಾರ್ ವಲ್ಲಭಾಬಾಯ್ ಪಟೇಲ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಂಡ್ ರಿಸರ್ಚ್ನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಇದು ಏರ್ ಅಂಬುಲೆನ್ಸ್ ಸೇರಿದಂತೆ ಅತ್ಯಾಧುನಿಕ ಆರೋಗ್ಯ ಸೇವೆಗಳನ್ನು ಒಳಗೊಂಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿದೆ.
ಸಬರಮತಿ ನದಿ ತಟದಲ್ಲಿ ಅಹ್ಮದಾಬಾದ್ ಶಾಪಿಂಗ್ ಫೆಸ್ಟಿವಲ್ನ್ನೂ ಮೋದಿ ಉದ್ಘಾಟಿಸಲಿದ್ದಾರೆ. ನಗರದ ಉದ್ಯಮಿಗಳಿಗೆ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸಲು ಇದು ಉತ್ತಮ ಅವಕಾಶವನ್ನು ಒದಗಿಸಲಿದೆ.
ಸೂರತ್ನಲ್ಲಿ ಹಝೀರ ಗನ್ ಫ್ಯಾಕ್ಟರಿ ಸ್ಥಾಪನೆಯ ಸ್ಮರಣಾರ್ಥ ನಡೆಯಲಿರುವ ಕಾರ್ಯಕ್ರಮದಲ್ಲೂ ಅವರು ಭಾಗಿಯಾಗಲಿದ್ದಾರೆ.
source: www.newsonair.com
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.