ನವದೆಹಲಿ: ಉಭಯ ದೇಶಗಳ ನಡುವಣ ಬಾಂಧವ್ಯವನ್ನು ಮತ್ತಷ್ಟು ವೃದ್ಧಿಗೊಳಿಸುವ ಸಲುವಾಗಿ ಭಾರತ ಮತ್ತು ಮಾಲ್ಡೀವ್ಸ್ 90 ದಿನಗಳ ವೀಸಾ ಮುಕ್ತ ಪ್ರಯಾಣದ ಒಪ್ಪಂದವನ್ನು ಮಾಡಿಕೊಂಡಿದೆ.
ಈ ಒಪ್ಪಂದದ ಅನ್ವಯ, ಪ್ರವಾಸೋದ್ಯಮ, ವೈದ್ಯಕೀಯ ಮತ್ತು ಕೆಲ ವ್ಯವಹಾರ ಉದ್ದೇಶಗಳಿಗೆ ಉಭಯ ದೇಶಗಳ ವಿದ್ಯಾರ್ಥಿಗಳು, ಉದ್ಯೋಗಸ್ಥರು ಸೇರಿದಂತೆ ಜನರು ಪರಸ್ಪರರ ನೆಲಕ್ಕೆ ವೀಸಾ ಇಲ್ಲದೆ ಪ್ರಯಾಣಿಸುವ ಅವಕಾಶ ಸಿಗಲಿದೆ.
ಭಾರತ ಮತ್ತು ಮಾಲ್ಡೀವ್ಸ್ ಪಾರಂಪರಿಕ ಸ್ನೇಹ ಸಂಬಂಧವನ್ನು ಹೊಂದಿದ್ದು, ದ್ವಿಪಕ್ಷೀಯ ಸಂಬಂಧವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಮತ್ತಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದರಲ್ಲಿ ವೀಸಾ ಒಪ್ಪಂದ ಕೂಡ ಒಂದಾಗಿದ್ದು, 2018ರ ನವೆಂಬರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಲ್ಡೀವ್ಸ್ಗೆ ತೆರಳಿದ ಸಂದರ್ಭದಲ್ಲೇ ಈ ಒಪ್ಪಂದಕ್ಕೆ ಆರಂಭ ನೀಡಲಾಗಿತ್ತು.
source: newsbharati
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.