ನವದೆಹಲಿ: ಮೊದಲ 100 ದಿನಗಳಲ್ಲಿ ಅತ್ಯಂತ ಮಹತ್ವದ ಸಾಧನೆಯನ್ನು ಮಾಡಿರುವ ಕೇಂದ್ರ ಸರ್ಕಾರದ ಆಯುಷ್ಮಾನ್ ಯೋಜನೆಗೆ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ.
ಟ್ವಿಟ್ ಮಾಡಿರುವ ಅವರು, ‘ಆಯುಷ್ಮಾನ್ ಯೋಜನೆ 100 ದಿನಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ಭಾರತ ಸರ್ಕಾರಕ್ಕೆ ಅಭಿನಂದನೆಗಳು. ಈ ಯೋಜನೆಗೆ ಇದುವರೆಗೆ ಎಷ್ಟು ಮಂದಿ ಒಳಪಟ್ಟಿದ್ದಾರೆ ಎಂಬುದನ್ನು ತಿಳಿಯಲು ಸಂತೋಷವಾಗುತ್ತದೆ’ ಎಂದಿದ್ದಾರೆ. ಈ ಟ್ವಿಟ್ನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಟ್ಯಾಗ್ ಮಾಡಿದ್ದಾರೆ.
ಬಿಲ್ ಗೇಟ್ಸ್ ಶ್ಲಾಘನೆಗೆ ಧನ್ಯವಾದ ತಿಳಿಸಿರುವ ಮೋದಿ, ’ಆಯುಷ್ಮಾನ್ ಭಾರತವು ಬಡವರಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಯನ್ನು ನೀಡುವ ನಮ್ಮ ಬದ್ಧತೆಯನ್ನು ಹೊರಹೊಮ್ಮಿಸಿದೆ’ ಎಂದಿದ್ದಾರೆ.
‘ಯೋಜನೆಯ ಮೊದಲ 100 ದಿನಗಳು ಮಹತ್ವದ್ದಾಗಿದ್ದು, ಮುಂಬರುವ ದಿನಗಳಲ್ಲೂ ಹೆಚ್ಚಿನವರನ್ನು ಇದು ತಲುಪಲಿದೆ’ ಎಂದಿದ್ದಾರೆ.
ಆಯುಷ್ಮಾನ್ ಯೋಜನೆ ಮೊದಲ 100 ದಿನಗಳಲ್ಲಿ 6,85,000 ಫಲಾನುಭವಿಗಳನ್ನು ಹೊಂದಿದೆ ಎಂದು ಕೇಂದ್ರ ಸರ್ಕಾರ ಇತ್ತೀಚಿಗೆ ಹೇಳಿದೆ.
ಕಳೆದ ಸೆಪ್ಟಂಬರ್ ತಿಂಗಳಲ್ಲಿ ಆಯುಷ್ಮಾನ್ ಯೋಜನೆಗೆ ಚಾಲನೆ ನೀಡಲಾಗಿತ್ತು.
Congratulations to the Indian government on the first 100 days of @AyushmanNHA. It’s great to see how many people have been reached by the program so far. @PMOIndia https://t.co/AHHktUt95z
— Bill Gates (@BillGates) January 17, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.