ಕಡಪ: ದೇಶ ಫಸ್ಟ್, ಜನರು ನೆಕ್ಸ್ಟ್ ಮತ್ತು ನಾವು ಲಾಸ್ಟ್ ಎಂಬ ಧ್ಯೇಯವಾಕ್ಯದೊಂದಿಗೆ ಬಿಜೆಪಿ ಕಾರ್ಯನಿರ್ವಹಿಸುತ್ತದೆ. ನಮಗೆ ರಾಜಕೀಯ ಹಿತಾಸಕ್ತಿ ಮುಖ್ಯವಲ್ಲ, ಸಾರ್ವಜನಿಕ ಹಿತಾಸಕ್ತಿ ಮುಖ್ಯ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಆಂಧ್ರಪ್ರದೇಶದ ಕಡಪದಲ್ಲಿ ಎನ್ಟಿ ರಾಮ್ ರಾವ್ ಅವರ ಪುಣ್ಯ ಸ್ಮರಣೆಯ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸಮಾಜದ ಪ್ರತಿ ವರ್ಗವನ್ನೂ ಗಮನದಲ್ಲಿಟ್ಟುಕೊಂಡು ಎಲ್ಲಾ ಯೋಜನೆಗಳನ್ನು ನಮ್ಮ ಸರ್ಕಾರ ಅನುಷ್ಠಾನಕ್ಕೆ ತಂದಿದೆ ಎಂದಿದ್ದಾರೆ.
ಎನ್ಟಿಆರ್ ಅವರ ಕನಸನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪೂರ್ಣಗೊಳಿಸಲಿದೆ. ಆಂಧ್ರ ಮತ್ತು ದೇಶದ ಹೆಮ್ಮೆಯನ್ನು ಸಂರಕ್ಷಿಸಲಿದೆ. ಪ್ರತಿ ರಾಜ್ಯದ ಘನತೆಯನ್ನು ಸಂರಕ್ಷಿಸದೆ ದೇಶವನ್ನು ಸಂರಕ್ಷಣೆ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.
ಎನ್ಟಿಆರ್ ಕಾಂಗ್ರೆಸ್ ಬೆಳೆಯಲು ಸಾಕಷ್ಟು ಕೊಡುಗೆ ನೀಡಿದ್ದಾರೆ. ಆದರೆ ಆ ಪಕ್ಷ ಅವರನ್ನು ಅವಮಾನಿಸಿತು. ಅವರ ಮೃತದೇಹ ಪಕ್ಷದ ಕಛೇರಿಗೂ ಬಾರದಂತೆ ಮಾಡಿತು ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.