ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಜನವರಿ 27ರಂದು ದಕ್ಷಿಣ ಭಾರತದ ರಾಜ್ಯಗಳಾದ ತಮಿಳುನಾಡು ಮತ್ತು ಕೇರಳಕ್ಕೆ ಭೇಟಿ ನೀಡುತ್ತಿದ್ದು, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ದೇಗುಲ ನಗರಿ ಮಧುರೈನಲ್ಲಿ ಏಮ್ಸ್ ಆಸ್ಪತ್ರೆಗೆ ಅವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಬಳಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ತಮಿಳುನಾಡಿನಲ್ಲಿ ಬಿಜೆಪಿ ಪೊಣ್ ರಾಧಕೃಷ್ಣನ್ ಎಂಬ ಒಬ್ಬ ಸಂಸದರನ್ನು ಹೊಂದಿದ್ದು, ಮುಂದಿನ ಚುನಾವಣೆಯಲ್ಲಿ ಸಂಖ್ಯೆಯನ್ನು ಹೆಚ್ಚಳಗೊಳಿಸುವತ್ತ ಹೆಚ್ಚಿನ ಗಮನವನ್ನು ಹರಿಸಿದೆ. ಎಐಎಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ನಿರೀಕ್ಷೆಯೂ ಇದೆ.
ಕೇರಳದಲ್ಲಿ ಇನ್ನೂ ಬಿಜೆಪಿ ಖಾತೆ ತೆರೆದಿಲ್ಲ. ಆದರೆ ಮುಂದಿನ ಚುನಾವಣೆಯಲ್ಲಿ ಖಾತೆ ತೆರೆಯಲು ಶತಾಯ ಗತಾಯ ಪ್ರಯತ್ನವನ್ನು ಮಾಡಲಿದೆ.
ಕೇರಳ ಮತ್ತು ತಮಿಳುನಾಡು ಒಟ್ಟಿಗೆ 59 ಸಂಸದರನ್ನು ಲೋಕಸಭೆಗೆ ಕಳುಹಿಸುತ್ತದೆ. ಇಲ್ಲಿ ತನ್ನ ಹೆಜ್ಜೆ ಗುರುತನ್ನು ಮೂಡಿಸಲು ಬಿಜೆಪಿ ಪ್ರಯತ್ನ ಮುಂದುವರೆಸಲಿದೆ. ಈ ಹಿನ್ನಲೆಯಲ್ಲಿ ಪ್ರಧಾನಿಯವರ ಆಗಮನ ಮತ್ತು ಸಮಾವೇಶಗಳು ಜನರ ಮೇಲೆ ಹೆಚ್ಚಿನ ಪ್ರಭಾವ ಬೀರಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.