ನವದೆಹಲಿ: ಇಂದು ಸರ್ಕಾರ ‘ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ’ವನ್ನು ಆಚರಿಸುತ್ತಿದೆ. ಹೆಣ್ಣು ಮಕ್ಕಳಿಗಾಗಿ ತಂದಿರುವ ಅತ್ಯಂತ ಮಹತ್ವಾಕಾಂಕ್ಷೆಯ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಈ ದಿನ ನಾಲ್ಕು ವರ್ಷಗಳನ್ನೂ ಪೂರೈಸುತ್ತಿದೆ.
2015ರ ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈ ಯೋಜನೆಗೆ ಹರಿಯಾಣದ ಪಾಣಿಪತ್ನಲ್ಲಿ ಚಾಲನೆಯನ್ನು ನೀಡಿದ್ದರು. ಲಿಂಗಾನುಪಾತವನ್ನು ಕುಗ್ಗಿಸುವುದು ಮತ್ತು ಹೆಣ್ಣು ಮಕ್ಕಳ ಸಬಲೀಕರಣ ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ಈ ವರ್ಷ ’ಉತ್ತಮ ನಾಳೆಗಾಗಿ ಹೆಣ್ಣು ಮಗುವಿನ ಸಬಲೀಕರಣ’ ಎಂಬ ಥೀಮ್ನೊಂದಿಗೆ ಈ ವರ್ಷದ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ದೇಶದಾದ್ಯಂತ ಹೆಣ್ಣು ಮಕ್ಕಳ ಬಗ್ಗೆ ಜಾಗೃತಿ ಅರಿವು ಮೂಡಿಸುವ ಕಾರ್ಯಕ್ರಮಗಳು ಆಯೋಜನೆಗೊಳ್ಳಲಿದೆ.
ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವಾಲಯ, ಸಮಾಜ ಕಲ್ಯಾಣ ಸಚಿವಾಲಯ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.