ನವದೆಹಲಿ: ಶಸ್ತ್ರಾಸ್ತ್ರ ಪಡೆಗಳ ಅಗತ್ಯವನ್ನು ಪೂರೈಸುವ ಸಲುವಾಗಿ ಸಾಮರ್ಥ್ಯ ನಿರ್ಮಾಣಕ್ಕಾಗಿ ದೇಶೀಯ ರಕ್ಷಣಾ ಉತ್ಪಾದನೆಯನ್ನು ಉತ್ತೇಜಿಸುವತ್ತ ಸರ್ಕಾರವು ಹೆಚ್ಚು ಗಮನವನ್ನು ಹರಿಸುತ್ತಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ ಹೇಳಿದ್ದಾರೆ.
ಇದೇ ಹಿನ್ನಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿಯವರು ಎರಡು ರಕ್ಷಣಾ ಕಾರಿಡಾರ್ಗಳನ್ನು ನಿರ್ಮಾಣ ಮಾಡಲು ಚಿಂತನೆ ನಡೆಸಿದ್ದಾರೆ. ಒಂದು ತಮಿಳುನಾಡು, ಮತ್ತೊಂದು ಉತ್ತರಪ್ರದೇಶದಲ್ಲಿ ರಕ್ಷಣಾ ಕಾರಿಡಾರ್ ನಿರ್ಮಾಣವಾಗಲಿದೆ ಎಂದಿದ್ದಾರೆ.
ತಮಿಳುನಾಡಿನ ಹೂಡಿಕೆದಾರರ ಸಮಾವೇಶದಲ್ಲಿ ಮಾತನಾಡಿದ ಅವರು, ದೊಡ್ಡ ರಕ್ಷಣಾ ಪರಿಕರಗಳನ್ನು ಬೇರೆ ದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತದೆ. ಮುಂದೆ ಹಾಗಾಗಬಾರದು. ನಮ್ಮ ರಕ್ಷಣಾ ಸಾಮಾಗ್ರಿಗಳನ್ನು ನಾವೇ ಉತ್ಪಾದನೆ ಮಾಡಬೇಕು. ಇದಕ್ಕಾಗಿ ವಿದೇಶದ ದೊಡ್ಡ ದೊಡ್ಡ ಉತ್ಪಾದಕರಿಗೆ ಭಾರತಕ್ಕೆ ಬಂದು ಹೂಡಿಕೆ ಮಾಡುವಂತೆ ಆಹ್ವಾನ ನೀಡಿದ್ದೇವೆ ಎಂದಿದ್ದಾರೆ.
ಕಳೆದ ವರ್ಷ ತಮಿಳುನಾಡಿನಲ್ಲಿ ನಡೆಸಿದ ಡಿಫೆನ್ಸ್ ಎಕ್ಸ್ಪೋ ಸಾಕಷ್ಟು ಲಾಭವನ್ನು ತಂದುಕೊಟ್ಟಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.