ಬೆಳ್ತಂಗಡಿ: ಮಾಧ್ಯಮ ಕ್ಷೇತ್ರದಲ್ಲಿ ಇಂದು ವಿಪುಲವಾದ ಅವಕಾಶಗಳಿದ್ದು, ಪತ್ರಿಕೋದ್ಯಮದಲ್ಲಿ ಪದವಿ ಮಾಡಿದವರಿಗೆ, ಅದರಲ್ಲಿಯೂ ವಿಶೇಷವಾಗಿ ಸ್ನಾತಕೊತ್ತರ ಪದವಿ ಮಾಡಿದವರಿಗೆ ತುಂಬಾ ಬೇಡಿಕೆ ಇದೆ ಎಂದು ಬೆಂಗಳೂರು ವಿಶ್ವವಿದ್ಯಾನಿಲಯದ ವಿದ್ಯುನ್ಮಾನ ಮಾಧ್ಯಮ ವಿಭಾಗದ ಉಪನ್ಯಾಸಕಿ ವಾಹಿನಿ ಅವರು ಹೇಳಿದರು.
ಇವರು ಇತ್ತೀಚೆಗೆ ಉಜಿರೆಯ ಶ್ರೀ ಧ.ಮಂ. ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಮಾಧ್ಯಮ ಕ್ಷೇತ್ರದಲ್ಲಿರುವ ಉದ್ಯೋಗಾವಕಾಶಗಳ ಬಗ್ಗೆ ಮಾತನಾಡಿದ ಅವರು, ಪತ್ರಿಕೋದ್ಯಮ ಅಧ್ಯಯನ ಮಾಡಿದವರಿಗೆ ಉದ್ಯೋಗದ ಹೆಬ್ಬಾಗಿಲು ತೆರೆದಿದೆ. ದೂರದರ್ಶನ, ರೇಡಿಯೋ ಮಾತ್ರವಲ್ಲದೇ ಮುದ್ರಣ ಕ್ಷೇತ್ರದಲ್ಲಿಯೂ ಇಂದು ಉದ್ಯೋಗಾವಕಾಶಗಳು ಹೇರಳವಾಗಿದೆ ಎಂದು ತಿಳಿಸಿದರು.
ವಾರ್ತಾ ಇಲಾಖೆಯಲ್ಲಿ ಪತ್ರಿಕೋದ್ಯಮ ಪದವೀಧರರಿಗೆ ಮೀಸಲಾತಿಯಿದ್ದು, ಕೇಂದ್ರ ಸರ್ಕಾರದ ಸ್ವಾಮ್ಯದ ವಾರ್ತಾ ಮತ್ತು ಪ್ರಸಾರ ಇಲಾಖೆಯಲ್ಲಿ ಪ್ರತಿ ವರ್ಷ ಉದ್ಯೊಗವನ್ನು ನೀಡುವ ಪ್ರಸ್ತಾವನೆ ಜಾರಿಯಯಾಗಿದೆ. ಸಂವಹನದಲ್ಲಿ ಪರಿಣತಿ ಸಾಧಿಸಿದವರಿಗೆ ಅವಕಾಶವಿದೆ ಎಂದರು.
ಇಸ್ರೋದಲ್ಲಿ ಇತ್ತೀಚಿಗೆ ಕೆಲವು ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಉದ್ಯೋಗ ದೊರಕಿರುವುದನ್ನು ಉಲ್ಲೇಖಿಸುತ್ತಾ, ವಾಣಿಜ್ಯ ಮತ್ತು ವಿಜ್ಞಾನ ಕ್ಷೇತ್ರದಲ್ಲಿಯೂ ಪತ್ರಿಕೋದ್ಯಮ ಪದವೀಧರರಿಗೆ ಬೇಡಿಕೆ ಇರುವುದು ಒಳ್ಳೆಯ ಬೆಳವಣಿಗೆ ಎಂದ ಇವರು, ಜಾಹಿರಾತು ಕ್ಷೇತ್ರ ಮತ್ತು ಸಾರ್ವಜನಿಕ ಸಂಪರ್ಕ ಕ್ಷೇತ್ರಗಳಲ್ಲಿಯೂ ಸಂವಹನ ವಿದ್ಯಾರ್ಥಿಗಳು ಲಗ್ಗೆ ಇಡಬಹುದಾಗಿದೆ. ಸಾಕ್ಷ್ಯಚಿತ್ರ ನಿರ್ಮಾಣ, ಪೋಟೋಗ್ರಫಿ, ವೀಡಿಯೋಗ್ರಫಿ ಮುಂತಾದುವುಗಳಲ್ಲಿ ಪರಿಣತಿ ಹೊಂದಿ ಉತ್ತಮ ಭವಿಷ್ಯ ರೂಪಿಸಬಹುದು ಎಂದು ಹೇಳಿದರು.
ಉಜಿರೆಯಲ್ಲಿ ಪತ್ರಿಕೋದ್ಯಮ ಅಧ್ಯಯನಕ್ಕೆ ಪೂರಕ ವಾತಾವರಣವಿದ್ದು, ಮಾಧ್ಯಮ ಕ್ಷೇತ್ರದಲ್ಲಿ ಇಲ್ಲಿನ ವಿದ್ಯಾರ್ಥಿಗಳ ಬಗ್ಗೆ ಒಳ್ಳೆಯ ಅಭಿಪ್ರಾಯವಿದೆ ಎಂದು ಶ್ಲಾಘಿಸಿದರು. ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಲು ಇಚ್ಛಿಸುವವರು ಭಾಷೆಯ ಮೇಲೆ ಹಿಡಿತ ಸಾಧಿಸಲು ಪ್ರಯತ್ನಿಸಬೇಕು ಎಂದು ನುಡಿದರು.
ಈ ಸಂದರ್ಭದಲ್ಲಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಭಾಸ್ಕರ ಹೆಗಡೆ, ಪ್ರಾಧ್ಯಾಪಕರು ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳು ಉಪಸ್ಥಿತರಿದ್ದ ಈ ಕಾರ್ಯಕ್ರಮದಲ್ಲಿ ಭಾಸ್ಕರ ಹೆಗಡೆ ಸ್ವಾಗತಿಸಿದರೆ, ಅಪೂರ್ವ ವಂದಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.