ನವದೆಹಲಿ: ಮಾಜಿ ರಕ್ಷಣಾ ಸಚಿವ ಜಾರ್ಜ್ ಫೆರ್ನಾಂಡಿಸ್ ಅವರು ಮಂಗಳವಾರ ಬೆಳಿಗ್ಗೆ ದೆಹಲಿಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 88 ವರ್ಷವಾಗಿತ್ತು.
ಅಲ್ಝೈಮರ್ ಎಂಬ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಕಳೆದ ಒಂದು ದಶಕಗಳಿಂದ ಸಾರ್ವಜನಿಕ ಜೀವನದಿಂದ ದೂರವಾಗಿ ಹಾಸಿಗೆ ಹಿಡಿದಿದ್ದರು.
1930ರಲ್ಲಿ ಮಂಗಳೂರಿನಲ್ಲಿ ಜನಿಸಿದ ಇವರು, ಕಾರ್ಮಿಕ ಮುಖಂಡ, ಪತ್ರಕರ್ತ ಮತ್ತು ಸಾಮಾಜಿಕ ಸೇವಕನಾಗಿ ಸೇವೆ ಸಲ್ಲಿಸಿದ್ದಾರೆ. ಡಾ.ಲೋಹಿಯಾ ಅವರಿಂದ ಪ್ರಭಾವಿತರಾಗಿ ಸಮಾಜವಾದಿಯಾಗಿದ್ದರು. ಜನತಾ ದಳದ ಹಿರಿಯ ನಾಯಕನಾಗಿದ್ದ ಅವರು, ಬಳಿಕ ಸಮತಾ ಪಕ್ಷವನ್ನು ಸ್ಥಾಪನೆ ಮಾಡಿದರು.
ವಿ.ವಿ.ಸಿಂಗ್ ಸರಕಾರದಲ್ಲಿ ರೈಲ್ವೆ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಮೊರಾರ್ಜಿ ದೇಸಾಯಿ ನೇತೃತ್ವದ ಸರ್ಕಾರ 1997ರಿಂದ 1980ರವರೆಗೆ ಅಧಿಕಾರದಲ್ಲಿದ್ದಾಗ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ ಡಿಎ ಸರ್ಕಾರದಲ್ಲಿ 1998ರಿಂದ 2004ರಿಂದ ರಕ್ಷಣಾ ಸಚಿವರಾಗಿದ್ದರು. 2009-10ರ ಅವಧಿಯಲ್ಲಿ ರಾಜ್ಯಸಭಾ ಸದಸ್ಯರಾದರು. ನಂತರ ಅನಾರೋಗ್ಯದ ಹಿನ್ನಲೆಯಲ್ಲಿ ರಾಜಕೀಯ ಜೀವನದಿಂದ ಹಿಂದೆ ಸರಿದಿದ್ದರು.
ಮಂಗಳೂರಿನ ಸಂತ ಅಲೋಸಿಯಸ್ ಕಾಲೇಜಿನಲ್ಲಿ ತಮ್ಮ ವಿದ್ಯಾಭ್ಯಾಸ ಮುಗಿಸಿದ್ದರು. ತುರ್ತು ಪರಿಸ್ಥಿತಿ ವಿರೋಧಿ ಮತ್ತು ನಾಗರಿಕ ಹಕ್ಕುಗಳ ಹೋರಾಟ, ಸಮಾಜ ಸೇವೆಗಳಿಂದ ರಾಷ್ಟ್ರ ರಾಜಕಾರಣದಲ್ಲಿ ಗುರುತಿಸಿಕೊಂಡರು.
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
During his long years in public life, George Sahab never deviated from his political ideology. He resisted the Emergency tooth and nail. His simplicity and humility were noteworthy. My thoughts are with his family, friends and lakhs of people grieving. May his soul rest in peace.
— Narendra Modi (@narendramodi) January 29, 2019
When we think of Mr. George Fernandes, we remember most notably the fiery trade union leader who fought for justice, the leader who could humble the mightiest of politicians at the hustings, a visionary Railway Minister and a great Defence Minister who made India safe and strong.
— Narendra Modi (@narendramodi) January 29, 2019
George Sahab represented the best of India’s political leadership.
Frank and fearless, forthright and farsighted, he made a valuable contribution to our country. He was among the most effective voices for the rights of the poor and marginalised.
Saddened by his passing away.
— Narendra Modi (@narendramodi) January 29, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.