ನವದೆಹಲಿ: ವಿವಾದದ ಕೇಂದ್ರ ಬಿಂದು ಆಗಿರುವ ಅಯೋಧ್ಯಾ ರಾಮಜನ್ಮಭೂಮಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ನರೇಂದ್ರ ಮೋದಿ ಸರ್ಕಾರ, ರಾಮ ಜನ್ಮಭೂಮಿ ಸುತ್ತಲ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಸಲುವಾಗಿ ಸುಪ್ರೀಂಕೋರ್ಟ್ಗೆ ರಿಟ್ ಅರ್ಜಿಯನ್ನು ಸಲ್ಲಿಸಿದೆ.
ಮೂಲಗಳ ಪ್ರಕಾರ, 2.77 ಎಕರೆ ವಿವಾದಿತ ಭೂಮಿಯನ್ನು ಹೊರತುಪಡಿಸಿ, ಉಳಿದ ಸ್ವಾಧೀನಪಡಿಸಿಕೊಂಡ 67 ಎಕರೆ ಭೂಮಿಯನ್ನು ಅದರ ಮಾಲೀಕರಿಗೆ ಹಿಂದಿರುಗಿಸಬಹುದಾಗಿದೆ. ರಿಟ್ ಪಿಟಿಷನ್ ಮೂಲಕ 67 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮೋದಿ ಸರ್ಕಾರ ಮುಂದಾಗಿದೆ.
ಇತ್ತೀಚಿಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಮೋದಿಯವರು, ಸುಪ್ರೀಂಕೋರ್ಟ್ ತೀರ್ಪಿನ ಬಳಿಕವಷ್ಟೇ ರಾಮಜನ್ಮಭೂಮಿ ಬಗೆಗೆ ಸುಗ್ರೀವಾಜ್ಞೆಯನ್ನು ತರಲು ಸಾಧ್ಯ ಎಂದಿದ್ದರು. ಈ ಮೂಲಕ ತೀರ್ಪು ಏನೇ ಬಂದರೂ ರಾಮ ಮಂದಿರ ನಿರ್ಮಾಣ ಮಾಡಲು ಸಿದ್ಧರಿದ್ದೇವೆ ಎಂಬ ಸೂಚನೆಯನ್ನು ನೀಡಿದ್ದರು.
ಸುಪ್ರೀಂಕೋರ್ಟ್, ರಾಮಮಂದಿರ ವಿಷಯದಲ್ಲಿ ವಿಳಂಬ ಧೋರಣೆಯನ್ನು ಅನುಸರಿಸುತ್ತಿರುವ ಹಿನ್ನಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಮಂದಿರ ನಿರ್ಮಾಣ ಮಾಡಬೇಕು ಎಂಬ ಒತ್ತಾಯಗಳು ಕೇಳಿ ಬರುತ್ತಿವೆ.
ಇದೀಗ ಸರ್ಕಾರ ರಿಟ್ ಅರ್ಜಿಯನ್ನು ಸಲ್ಲಿಸಿ, ಅದರ ಮುಖೇನ ರಾಮಜನ್ಮಭೂಮಿ ಸುತ್ತಲ ಒಂದಿಷ್ಟು ಎಕರೆಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವುದು ಮಹತ್ವದ ಬೆಳವಣಿಗೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.