ನವದೆಹಲಿ: ಫೆಬ್ರವರಿ 1ರಂದು ನರೇಂದ್ರ ಮೋದಿ ಸರ್ಕಾರ ಮಧ್ಯಂತರ ಬಜೆಟ್ನ್ನು ಮಂಡನೆಗೊಳಿಸಲಿದೆ ಎಂದು ಹಣಕಾಸು ಸಚಿವಾಲಯ ಬುಧವಾರ ಸ್ಪಷ್ಟಪಡಿಸಿದೆ. ಈ ಮೂಲಕ ಸರ್ಕಾರ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದೆ ಎಂಬ ವದಂತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ.
ನವದೆಹಲಿಯಲ್ಲಿ ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ಪಿಯೂಶ್ ಗೋಯಲ್ ಅವರು, ಫೆ.1ರಂದು ಸರ್ಕಾರ ಮಂಡಿಸಲಿರುವ ಬಜೆಟ್ನ್ನು ‘ಮಧ್ಯಂತರ ಬಜೆಟ್ 2019-20’ ಎಂದು ಕರೆಯಲಾಗುತ್ತದೆ ಎಂದಿದ್ದಾರೆ.
ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಫೆಬ್ರವರಿ 13ರವರೆಗೆ ನಡೆಯಲಿದ್ದು, ಫೆಬ್ರವರಿ 1 ರಂದು ಆಯವ್ಯಯ ಮಂಡನೆಯಾಗಲಿದೆ.
ಜನವರಿ 31 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಂಟಿ ಅಧಿವೇಶನ ಉದ್ಘಾಟಿಸಿ ಭಾಷಣ ಮಾಡಲಿದ್ದಾರೆ. ಈ ಮಧ್ಯಂತರ ಬಜೆಟ್ನಲ್ಲಿ ಮೋದಿ ಸರ್ಕಾರ ನೌಕರರಿಗೆ ಹೆಚ್ಚಿನ ಪರಿಹಾರ ನೀಡುವ ನಿರೀಕ್ಷೆಯಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.