ನವದೆಹಲಿ: ಆಗಸ್ಟಾ ವೆಸ್ಟ್ಲ್ಯಾಂಡ್ ಪ್ರಕರಣದಲ್ಲಿ ಸಹ ಆರೋಪಿಯಾಗಿರುವ ರಾಜೀವ್ ಸಕ್ಸೇನಾ ಅವರನ್ನು ಬುಧವಾರ, ಅವರ ಯುಎಇ ನಿವಾಸದಿಂದ ಭಾರತಕ್ಕೆ ಗಡಿಪಾರು ಮಾಡಲಾಗಿದೆ ಎಂದು ಅವರ ವಕೀಲರು ಹೇಳಿದ್ದಾರೆ.
ಬುಧವಾರ ಭಾರತೀಯ ಕಾಲಮಾನ ಬೆಳಗ್ಗೆ ಸುಮಾರು 11 ಗಂಟೆಗೆ, ಯುಎಇ ಸ್ಟೇಟ್ ಸೆಕ್ರೆಟರಿ ಸಕ್ಸೇನಾ ಅವರನ್ನು ಅವರ ನಿವಾಸದಿಂದ ವಶಕ್ಕೆ ಪಡೆದುಕೊಂಡಿದ್ದಾರೆ. ಸಂಜೆ 7 ಗಂಟೆಯ ಸುಮಾರಿಗೆ ಅವರನ್ನು ಕಾನೂನು ಬಾಹಿರವಾಗಿ ಭಾರತಕ್ಕೆ ಗಡಿಪಾರು ಮಾಡಲಾಗಿದೆ ಎಂದು ಅವರ ವಕೀಲರಾದ ಗೀತಾ ಲೂತ್ರಾ ಮತ್ತು ಪ್ರತೀಕ್ ಯಾದವ್ ಹೇಳಿದ್ದಾರೆ.
ದುಬೈ ಇಂಟರ್ನ್ಯಾಷನಲ್ ಏರ್ಪೋರ್ಟ್ನಿಂದ ಖಾಸಗಿ ಜೆಟ್ ಮೂಲಕ ಅವರನ್ನು ಕಳುಹಿಸಿಕೊಡಲಾಗಿದೆ ಎಂದಿದ್ದಾರೆ. ಯಾವುದೇ ಗಡಿಪಾರು ಪ್ರಕ್ರಿಯೆಯನ್ನು ಮಾಡದೆಯೇ ಭಾರತಕ್ಕೆ ಕಳುಹಿಸಿಕೊಡಲಾಗಿದೆ. ಅವರು ಕುಟುಂಬ ಮತ್ತು ವಕೀಲರಿಗೂ ಸಂಪರ್ಕಕ್ಕೆ ಸಿಗದಂತೆ ಮಾಡಲಾಗಿದೆ ಎಂದಿದ್ದಾರೆ.
ರಾಜೀವ್ ಸಕ್ಸೇನಾ ಗಡಿಪಾರು ಬಗ್ಗೆ ಭಾರತದ ಮೂಲದಿಂದ ಯಾವುದೇ ಸ್ಪಷ್ಟನೆಗಳು ಹೊರಬಿದ್ದಿಲ್ಲ.
ರಾಜೀವ್ ಸಕ್ಸೇನಾ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿ, ಅವರಿಗೆ ಜಾಮೀನು ನೀಡದಂತೆ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿತ್ತು. ಅಲ್ಲದೇ, ಯುಎಇಯಿಂದ ಭಾರತಕ್ಕೆ ಗಡಿಪಾರು ಮಾಡುವಂತೆ ಮನವಿ ಮಾಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.