ಪಣಜಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿಯನ್ನು ಗೆಲ್ಲಿಸಲು ಟೊಂಕಕಟ್ಟಿ ನಿಂತಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು, ಫೆಬ್ರವರಿ 9ರಂದು ಕರಾವಳಿ ರಾಜ್ಯ ಗೋವಾದಲ್ಲಿ 30 ಸಾವಿರ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ನಡೆಸುತ್ತಿದ್ದಾರೆ.
ಗೋವಾ ರಾಜಧಾನಿ ಪಣಜಿಯಲ್ಲಿ ಅಮಿತ್ ಶಾ ಅವರ ಸಮಾವೇಶ ಜರುಗಲಿದ್ದು, ಇದರಲ್ಲಿ 30 ಸಾವಿರ ಬೂತ್ ಮಟ್ಟದ ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎಂದು ಗೋವಾ ಬಿಜೆಪಿ ಮುಖ್ಯಸ್ಥ ವಿನಯ್ ತೆಂಡೂಲ್ಕರ್ ಹೇಳಿದ್ದಾರೆ.
ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಪ್ರಚಾರ ಕಾರ್ಯವನ್ನು ಚುರುಕುಗೊಳಿಸಿರುವ ಶಾ ಅವರು, ಶನಿವಾರ ಡೆಹ್ರಾಡೂನ್ನಲ್ಲಿ 18 ಸಾವಿರ ಕಾರ್ಯಕರ್ತರನ್ನು ಒಳಗೊಂಡ ಸಮಾವೇಶವನ್ನು ನಡೆಸುತ್ತಿದ್ದಾರೆ.
ಕಳೆದ ವಾರ ಹಿಮಾಚಲ ಪ್ರದೇಶ, ಒರಿಸ್ಸಾಗಳಲ್ಲಿ ಅವರು ಪ್ರಚಾರ ಸಮಾವೇಶ ಆಯೋಜನೆಗೊಳಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.