ತಿರುವನಂತಪುರಂ: ಜಮಾತ್ ಉಲ್ ಮುಜಾಹಿದ್ದೀನ್ ಬಾಂಗ್ಲಾದೇಶ್ ಉಗ್ರ ಸಂಘಟನೆಯ ಸದಸ್ಯ, 2014ರ ಬುರ್ದ್ವಾನ್ ಬಾಂಬ್ ಸ್ಫೋಟದ ಆರೋಪಿ ಅಬ್ದುಲ್ ಮತೀನ್ ಎಂಬಾತನನ್ನು ಶನಿವಾರ ಬಂಧಿಸಲಾಗಿದೆ.
ಪಶ್ಚಿಮಬಂಗಾಳ ವಿಶೇಷ ಪೊಲೀಸ್ ಪಡೆ ಮತ್ತು ಕೇರಳ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ನಡೆಸಿ ಮತೀನನ್ನು ಕೇರಳದ ಮಲ್ಲಪುರಂನಲ್ಲಿ ಬಂಧನಕ್ಕೊಳಪಡಿಸಿದ್ದಾರೆ.
ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಶೇರ್ಸ ಮದರಾಸದಲ್ಲಿ ಕಲಿಯುತ್ತಿದ್ದ ವೇಳೆ ಈತ ಜೆಎಂಬಿ ಉಗ್ರ ಸಂಘಟನೆಯ ಸಂಪರ್ಕಕ್ಕೆ ಬಂದಿದ್ದ. ಬಳಿಕ 15 ಮಂದಿಯೊಂದಿಗೆ ಸಿಮುಲಿಯ ಮದರಸ ಮತ್ತು ಮೊಕಿಮ್ನಗರ್ ಮದರಸದಲ್ಲಿ ತರಬೇತಿಯನ್ನು ಪಡೆದು ಬುರ್ದ್ವಾನ್ ಸ್ಫೋಟದಲ್ಲಿ ಭಾಗಿಯಾಗಿದ್ದ. ಇದರಲ್ಲಿ ಇಬ್ಬರು ಮೃತಪಟ್ಟಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.