ನವದೆಹಲಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿಯವರು ಫೆಬ್ರವರಿ 28ರಂದು ದೇಶದ 9 ಲಕ್ಷ ಮತಗಟ್ಟೆಗಳ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ತಮ್ಮ ಅಧಿಕೃತ ಮೊಬೈಲ್ ಆ್ಯಪ್, ನಮೋ ಆ್ಯಪ್ ಮೂಲಕ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದವನ್ನು ನಡೆಸಲಿದ್ದಾರೆ.
ಫೆ.12ರಿಂದ ಮಾರ್ಚ್ 2ರವರೆಗೆ ಬಿಜೆಪಿ ‘ಮೇರಾ ಪರಿವಾರ್ ಭಾಜಪಾ ಪರಿವಾರ್’ ಅಭಿಯಾನವನ್ನು ಆರಂಭಿಸಲಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತರು 50 ಮಿಲಿಯನ್ ಮನೆಗಳಲ್ಲಿ ಪಕ್ಷದ ಧ್ವಜ ಹಾರಿಸಲಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಸಕ್ರಿಯ ಪ್ರಚಾರ ನಡೆಸಲಿರುವ ಪ್ರಧಾನಿಗಳು, 90 ದಿನ, 100 ಸಮಾವೇಶಗಳನ್ನು ನಡೆಸಲಿದ್ದಾರೆ. ಶನಿವಾರ, ಭಾನುವಾರ ಎರಡು ದಿನವೇ ಅವರು ಆರು ಸಮಾವೇಶಗಳನ್ನು ನಡೆಸಿದ್ದಾರೆ.
ಫೆ.28ರ ಸಮಾವೇಶಕ್ಕೆ ಬಿಜೆಪಿ ಪಕ್ಷದ ಕಾರ್ಯಕರ್ತರಿಂದ ಪ್ರಶ್ನೆಗಳನ್ನು ಆಹ್ವಾನಿಸಿದೆ. ಫೆ.15ರೊಳಗೆ ಪ್ರಶ್ನೆಗಳನ್ನು ಕಳುಹಿಸುವಂತೆ ತಿಳಿಸಲಾಗಿದೆ. ಸಂವಾದದ ವೇಳೆ ಇದರಲ್ಲಿ ಕೆಲವು ಪ್ರಶ್ನೆಗಳಿಗೆ ಮೋದಿ ಉತ್ತರಿಸಲಿದ್ದಾರೆ. ಬಿಜೆಪಿ ಕೇಂದ್ರ ಕಛೇರಿಯಲ್ಲಿನ ತಂಡ ಕಾರ್ಯಕ್ರಮದ ಉಸ್ತುವಾರಿಯನ್ನು ನೋಡಿಕೊಳ್ಳಲಿದೆ. ಕಾರ್ಯಕರ್ತರು ನಮೋ ಆ್ಯಪ್ನ್ನು ಡೌನ್ಲೋಡ್ ಮಾಡಿಕೊಳ್ಳುವಂತೆ ಮತ್ತು ರೂ.5 ರಿಂದ ರೂ.1000 ವರೆಗೆ ಪಕ್ಷಕ್ಕೆ ದೇಣಿಗೆ ನೀಡುವಂತೆ ಕೋರಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.