ನವದೆಹಲಿ: ಸಂಸದೀಯ ಸಮಿತಿಯು ಟ್ವಿಟರ್ ಸಿಇಓ ಜಾಕ್ ಡೋರ್ಸೆ ಅವರಿಗೆ ಸಮನ್ಸ್ನ್ನು ಜಾರಿಗೊಳಿಸಿದ್ದು, ಫೆ.25ರೊಳಗೆ ತನ್ನ ಮುಂದೆ ಹಾಜರಾಗುವಂತೆ ಆದೇಶಿಸಿದೆ. ಸಮಿತಿ ಮುಂದೆ ಹಾಜರಾಗಿದ್ದ ಭಾರತೀಯ ಪ್ರತಿನಿಧಿಗಳನ್ನು ಭೇಟಿಯಾಗಲು ಅವರು ನಿರಾಕರಿಸಿದ ಹಿನ್ನಲೆಯಲ್ಲಿ ಈ ಸಮನ್ಸ್ ಜಾರಿಗೊಳಿಸಲಾಗಿದೆ. ಮೂಲಗಳ ಪ್ರಕಾರ, ಸಮಿತಿಯು ಫೇಸ್ಬುಕ್ ಸೇರಿದಂತೆ ಇನ್ನಿತರ ದೊಡ್ಡ ಸಾಮಾಜಿಕ ಜಾಲತಾಣ ವೇದಿಕೆಗಳಿಗೂ ಸಮನ್ಸ್ ಜಾರಿಗೊಳಿಸುವ ಸಾಧ್ಯತೆ ಇದೆ.
‘ನಿರ್ಧಾರ ತೆಗೆದುಕೊಳ್ಳುವ ಅಧಿಕಾರವಿಲ್ಲದ ಕಂಪನಿಯ ಪ್ರತಿನಿಧಿಗಳನ್ನು ತಾವು ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ’ ಎಂದು ಮಾಹಿತಿ ತಂತ್ರಜ್ಞಾನದ ಮೇಲಿನ ಸಂಸದೀಯ ಸಮಿತಿಯು ಹೇಳಿದೆ. ತನ್ನ ಸಭೆಯಲ್ಲಿ, ಭಾರತದಲ್ಲಿ ಸಮಸ್ಯೆ ಪರಿಹರಿಸಲು ಟ್ವಿಟರ್ ಕ್ರಮಾವಳಿ ಮತ್ತು ಅದರ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಜಾಹೀರಾತುಗಳ ದೇಣಿಗೆಯ ಮೂಲ ಯಾವುದು ಎಂಬುದರ ಬಗ್ಗೆ ಕಳವಳ ವ್ಯಕ್ತಪಡಿಸಿದೆ.
ಟ್ವಿಟರ್ ಮಾಧ್ಯಮದ ಸ್ವರೂಪದ ಬಗ್ಗೆ ಸಮಿತಿ ಸದಸ್ಯರು ಸ್ಪಷ್ಟತೆಯನ್ನು ಬಯಸುತ್ತಿದ್ದಾರೆ. ಟ್ವಿಟರ್ ತಂತ್ರಜ್ಞಾನ ಆಧಾರಿತ ವೇದಿಕೆಯೇ ಅಥವಾ ವಿಷಯ ನಿರ್ಬಂಧಿತ ವೇದಿಕೆಯೇ ಎಂಬ ಬಗ್ಗೆ ಅವರು ಸ್ಪಷ್ಟನೆ ಬಯಸುತ್ತಿದ್ದಾರೆ ಎನ್ನಲಾಗಿದೆ.
‘ಕ್ರಮಾವಳಿಗಳ ಮೂಲಕ ಅದು ವಿಷಯಗಳನ್ನು ನಿರ್ಬಂಧಿಸುವ ವೇದಿಕೆಯಾದರೆ ಅದು ಮಾಧ್ಯಮ ವೇದಿಕೆಯಾಗುತ್ತದೆ ಮತ್ತು ವಿದೇಶ ನೇರ ಬಂಡವಾಳ ಹೂಡಿಕೆ ಸೇರಿದಂತೆ ವಿಭಿನ್ನ ರೀತಿಯ ನಿರ್ಬಂಧಗಳನ್ನು ಹೊಂದಿರುತ್ತದೆ. ಆದರೆ ಈ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ’ ಎಂದು ಸಮಿತಿಯ ಒರ್ವ ಸದಸ್ಯರು ಅಭಿಪ್ರಾಯಿಸಿದ್ದಾರೆ.
ಬಿಜೆಪಿ ಮುಖಂಡ ಅನುರಾಗ್ ಠಾಕೂರ್ ಅವರು ಈ ಸಂಸದೀಯ ಸಮಿತಿಯ ನೇತೃತ್ವವನ್ನು ವಹಿಸಿದ್ದು, ಟ್ವಿಟರ್ ಇನ್ನಷ್ಟು ಹೆಚ್ಚು ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಚುನಾವಣೆಗಾಗಿ ಈ ವೇದಿಕೆಯನ್ನು ಬಳಸಿಕೊಳ್ಳುವುದರಿಂದ ಮತ್ತು ಇದರ ಮೂಲಕ ಜನರಲ್ಲಿ ಅಭಿಪ್ರಾಯ ಮೂಡಿಸುವ ಕಾರ್ಯ ಮಾಡುವುದರಿಂದ ಮುಂಬರುವ ಸಾರ್ವತ್ರಿಕ ಚುನಾವಣೆ ಮೇಲೆ ಪ್ರಭಾವ ಬೀರಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.